ಕುದ್ಮಾರು ಹಿರಿಯ ಮಾದರಿ ಕಿರಿಯ ಪ್ರಾಥಮಿಕ ಶಾಲೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಶಿಫಾರಸ್ಸಿನ ಮೇರೆಗೆ MRPL CRS ಫಂಡ್ ನ 15 ಲಕ್ಷ ಅನುದಾನದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.

ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಮಕ್ಕಳಿಗೆ ಬೇಸಿಗೆ ರಜೆ ಆರಂಭವಾಗುವ ಮುನ್ನವೇ ಸಂಸದರಿಂದ ಉದ್ಘಾಟನೆ ಆಗುವಂತೆ ಆಗಲಿ. ಈ ಕಾರ್ಯಕ್ಕೆ ಎಲ್ಲರೂ ಸಹಕರಿಸಿ ಒಟ್ಟಾಗಿ ಕೆಲಸ ಮಾಡುವಂತೆ ಮನವಿ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಭಾರತೀಯ ಜನತಾ ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಶಕ್ತಿ ಕೇಂದ್ರದ ಸದಸ್ಯರು, ಶಾಲೆಯ ಸಿಆರ್‌ಪಿ, ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಉಪಸ್ಥಿತರಿದ್ದರು.
























