ವೀರಕಂಭ: ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಕಾಣಿಸಿಕೊಂಡು ಮನೆಯಲ್ಲಿರುವ ವಸ್ತುಗಳೆಲ್ಲಾ ಆಹುತಿಯಾದ ಘಟನೆ ಗಣೇಶ್ ಕೋಡಿಯಲ್ಲಿ ನಡೆದಿದೆ.
ರಾಜೇಶ್ವರಿ ಎಂಬವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿರುವುದಾಗಿದೆ.
ಇದರಿಂದಾಗಿ ಮನೆಯಲ್ಲಿದ್ದ ಬಟ್ಟೆ ಬರೆ ಸೇರಿದಂತೆ ಇತರ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಈ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದೇ ಇದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಅಕ್ಕಪಕ್ಕದ ಮನೆಯವರು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
























