ಮಡಿಕೇರಿ: ಅಕ್ರಮ ಕೋಳಿ ಅಂಕ ಚೆಂಬು ಗ್ರಾಮದಲ್ಲಿ ನಡೆಯುತ್ತಿದ್ದ ಕುರಿತು ಮಾಹಿತಿ ಪಡೆದ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ.
ಸ್ಥಳದಲ್ಲಿ ಕೋಳಿ ಅಂಕ ನಡೆಸಲು ಕಬ್ಬಿಣದ ಬೇಲಿಯನ್ನು ಅಳವಡಿಸಲಾಗಿತ್ತು. ಹಲವಾರು ಕೋಳಿಗಳು ಸಹ ಉದ್ದೇಶಿತ ಸ್ಥಳದಲ್ಲಿ ಇದ್ದವು.
ದಾಳಿ ನಡೆಸಿದ ಪೊಲೀಸರು ಅಳವಡಿಸಲಾಗಿದ್ದ ಕಬ್ಬಿಣದ ಬೇಲಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ರೈಡ್ ವೇಳೆ ಅಲ್ಲಿ ಸೇರಿದ್ದ ಜನರು ಓಡಿ ಹೋದ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
























