ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್ ಆಗಿವೆ: ಬಿ. ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯ ಸರ್ಕಾರದ ಸಾಧನಾ ಸಮಾವೇಶಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮಾತನಾಡಿದ್ದು, ಕಾಂಗ್ರೆಸ್ ತನ್ನ ಯೋಜನೆಗಳನ್ನು ಸಾಧನೆ ಎಂದು ಹೇಳಿಕೊಳ್ಳುತ್ತಿದ್ದರೂ ಜನರಿಗೆ ತಲುಪುತ್ತಿರುವ ಪ್ರಯೋಜನ ಮಾತ್ರ ಕಡೆಮೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳ ಬಗ್ಗೆ ಟೀಕೆ ಮಾಡಿರುವ ಅವರು ಆ ಗ್ಯಾರಂಟಿಗಳು ಈಗಾಗಲೇ ಪಂಚರ್ ಆಗಿವೆ. ಸರ್ಕಾರದ ಗ್ಯಾರಂಟಿಗಳು ಕೇವಲ ಪ್ರಚಾರಕ್ಕೆ ಮಾತ್ರ. ಕಾಂಗ್ರೆಸ್ ಅಧಿಕಾರಕ್ಕೆ ಬಂದು 1000 ದಿನಗಳಾಗಿದ್ದರೂ ಜನರನ್ನು ಕಾಯಿಸುವುದೇ ಕೈಲಾಸ ಎಂಬಂತೆ ವರ್ತಿಸುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಗೃಹಲಕ್ಷ್ಮೀ ‌ಸೇರಿದಂತೆ ಇನ್ನೂ ಹಲವು ಯೋಜನೆಗಳ ಹಣದ ಬಗ್ಗೆ ಸ್ಪಷ್ಟತೆ ಇಲ್ಲ. ರಾಜ್ಯ ಸರ್ಕಾರದ ಮಂತ್ರಿಗಳ ಈ ಹಿಂದೆ ಭಾರೀ ಸುದ್ದಿಯಾಗಿದ್ದ ಹಗರಣಗಳ ಬಗೆಗೂ ಮಾತನಾಡಿದ ಅವರು, ಐದು ಸಾವಿರ ಕೋಟಿ ರೂ. ಎಲ್ಲಿಗೆ ಹೋಯಿತು ಎಂಬ ಬಗ್ಗೆಯೂ ಮುಖ್ಯಮಂತ್ರಿಗಳು ಉತ್ತರ ನೀಡಬೇಕು ಎಂದು ಹೇಳಿದ್ದಾರೆ. ಹಾಗೆಯೇ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದ್ದಾರೆ.





















































 
 

ಕರ್ನಾಟಕದ ಅಭಿವೃದ್ಧಿ ಕ್ಷೀಣಿಸಿದೆ. ಮೂಲಸೌಕರ್ಯ ಸಮಸ್ಯೆಗಳು ಮುಂದುವರೆದಿದೆ. ತಮ್ಮ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕಾಂಗ್ರೆಸ್ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

error: Content is protected !!
Scroll to Top