ಪುತ್ತೂರು: ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಈಗ ಮತ್ತೆ ಪೊಲೀಸ್ ಬಲೆಗೆ ಬಿದ್ದಿದ್ದಾನೆ.
ಬಂಧಿತ ಆರೋಪಿಯನ್ನು ಪುತ್ತೂರು ಕಸಬಾ ಗ್ರಾಮದ ಅಬ್ಬಾಸ್ ಆಲಿ ಅಲ್ತಾಫ್(55) ಎಂದು ಗುರುತಿಸಲಾಗಿದೆ.
ಪ್ರಸ್ತುತ ಈತ ಮಂಗಳೂರಿನ ಪದವು ಎಂಬಲ್ಲಿ ವಾಸ್ತವ್ಯ ಇದ್ದ. ಈತನನ್ನು ಮಂಗಳೂರಿನ ಬಿಕರ್ನಕಟ್ಟೆ ಕುಲಶೇಖರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅಲ್ತಾಫ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ.: 18/2026, ಕಲಂ: 269 ಬಿಎನ್ಎಸ್ 2023 ರಂತೆ ಪ್ರಕರಣ ದಾಖಲಾಗಿದೆ. ಈತ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
























