ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಮಂಗಳೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯು ಇನೋಳಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಠಾರದಲ್ಲಿ ಜರಗಿತು.

ದೇವಾಲಯದ ಆಡಳಿತ ಸಮಿತಿಯ ಅಧ್ಯಕ್ಷ ಚಂದ್ರಹಾಸ ಪೂಂಜ ದೀಪ ಬೆಳಗಿಸಿ ಸಭೆಯನ್ನು ಉದ್ಘಾಟಿಸಿ ಹಿರಿಯರ ಸೇವಾ ಪ್ರತಿಷ್ಠಾನದ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಅಧ್ಯಕ್ಷ ಕೆಯ್ಯೂರು ನಾರಾಯಣ ಭಟ್ ವಹಿಸಿದ್ದರು. ಮೇಲ್ಕಾರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಶಂಕರಪತ್ತಿನ ಸಹಕಾರಿ ಸಂಘದ ಶಾಖೆಯನ್ನು ಪುತ್ತೂರು ನಗರದಲ್ಲಿ ತೆರೆಯಲು ಯೋಜಿಸಲಾಗುತ್ತಿದ್ದು ಪ್ರತಿಷ್ಠಾನದ ಟ್ರಸ್ಟಿಗಳು ಮತ್ತು ಸದಸ್ಯರು ಸಹಕಾರ ನೀಡಬೇಕೆಂದು ತಿಳಿಸಿದರು.
ಪ್ರತಿಷ್ಠಾನದ ಸದಸ್ಯರ ಕೈಪಿಡಿಯನ್ನು ಸಿದ್ಧಪಡಿಸಲು ಅಗತ್ಯ ಮಾಹಿತಿಯನ್ನು ಎಲ್ಲಾ ತಾಲೂಕು ಘಟಕಗಳು ನೀಡುವಂತೆ ತಿಳಿಸಲಾಯಿತು.





















































 
 

ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ್ ಆಳ್ವ ಪಡುಮಲೆ, ಭವಾನಿ ಶಂಕರ್ ಶೆಟ್ಟಿ ಪುತ್ತೂರು, ಉದಯಶಂಕರ ರೈ ಪುಣಚ,ಗುಂಡ್ಯಡ್ಕ ಈಶ್ವರ ಭಟ್, ವಿಶ್ವನಾಥ ಪೂಂಜ,ನಾರಾಯಣ ಸಪಲ್ಯ ,ಕೆ.ರಾಜಾರಾಮ ಐತಾಳ ,ಸೋಮನಾಥ ಬೇಕಲ್, ಚಂದ್ರಕಲಾ ಎಸ್ ಬೇಕಲ್, ಪ್ರಭಾಕರ ನಾಯ್ಕ್,ನಾರಾಯಣ ಮೊದಲಾದವರು ಉಪಸ್ಥಿತರಿದ್ದರು.

ಪ್ರತಿಷ್ಠಾನದ ಸಂಚಾಲಕ ಭಾಸ್ಕರ ಬಾರ್ಯ ಸ್ವಾಗತಿಸಿ, ಖಜಾಂಜಿ ಕೃಷ್ಣಶರ್ಮ ಅನಾರು ವಂದಿಸಿದರು. ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

error: Content is protected !!
Scroll to Top