ಕಡಬ: ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆಯ ಯುವ ನ್ಯಾಯವಾದಿ ಪ್ರದೀಶ್ ಪಿ.ಜೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಕ್ರಿಶ್ಚಿಯನ್ ವಿವಾಹ ನೋಂದಣಿ ಅಧಿಕಾರಿಯಾಗಿ ಸರ್ಕಾರ ನೇಮಿಸಿದೆ.
1872ರ ಭಾರತೀಯ ಕ್ರಿಶ್ಚಿಯನ್ ವಿವಾಹ ಕಾಯ್ದೆಯ ಕಲಂ 07 (ಕೇಂದ್ರ ಕಾಯ್ದೆ XV) ಹಾಗೂ ಕ್ರಿಶ್ಚಿಯನ್ ವಿವಾಹ (ಕರ್ನಾಟಕ) ನಿಯಮಗಳು 1961ರನ್ವಯ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಲು ವಿವಾಹ ನೋಂದಣಿ ಮಾಡುವ ಉದ್ದೇಶಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಸೀಮಿತಗೊಳಿಸಿ
ಕ್ರಿಶ್ಚಿಯನ್ ಜನಾಂಗದ ವಿವಾಹ ವಿಧಿ ನೆರವೇರಿಸಲು ವಿವಾಹ ನೋಂದಣಾಧಿಕಾರಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
























