ಚಿತ್ರದುರ್ಗ: ನಗರದ ವಸತಿ ಶಾಲೆಯೊಂದರ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಚಿತ್ರದುರ್ಗದ ಕರಿಯಣ್ಣನಹಳ್ಳಿ ನಿವಾಸಿ, ಭರಮಸಾಗರದ ಖಾಸಗಿ ವಸತಿ ಶಾಲಾ ವಿದ್ಯಾರ್ಥಿ ಕೊಟ್ರೇಶ್ ಎಂಬವನೇ ಮೃತ ವಿದ್ಯಾರ್ಥಿ. ಈತ ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆಗೆ ಶರಣಾಗಿರುವುದಾಗಿದೆ.
ಯಾವ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಕಾರಣ ತಿಳಿದು ಬಂದಿಲ್ಲ. ಈತ ಕಟ್ಟಡದಿಂದ ಜಿಗಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪರಮ ಸಾಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
























