ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ತನ್ನ ಪುತ್ರಿಗೆ ಪರೀಕ್ಷೆ ಇರುವ ಹಿನ್ನೆಲೆ ತನಗೆ ಮಧ್ಯಂತರ ಜಾಮೀನು ನೀಡುವಂತೆ ಪವಿತ್ರಾ ಕೋರ್ಟ್‌ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಅವರ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ಆ ಮೂಲಕ ಜಾಮೀನಿಗೆ ಸಂಬಂಧಿಸಿದ ಹಾಗೆ ಪವಿತ್ರಾ ಗೌಡಗೆ ಮತ್ತೆ ನಿರಾಸೆಯಾಗಿದೆ.
ಮಗಳಿಗೆ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆ ತಮಗೆ 25 ದಿನಗಳ ಮಧ್ಯಂತರ ಜಾಮೀನು ನೀಡುವಂತೆ ಜಾಮೀನು ಅರ್ಜಿಯಲ್ಲಿ ಪವಿತ್ರಾ ಮನವಿ ಮಾಡಿದ್ದರು.
























