ಶಾಸಕ ಸ್ಥಾನದಿಂದ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಂಡಿರುವ ಹಿನ್ನೆಲೆಯಲ್ಲಿ ಟೀಕೆ
ಬೆಂಗಳೂರು: ಬಾಗೇಪಲ್ಲಿ ಶಾಸಕ ಸ್ಥಾನದಿಂದ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ ಬೆನ್ನಲ್ಲೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಾಂಗ್ರೆಸ್‌ನ ಕಾಲೆಳೆದಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅಶೋಕ್, ವೋಟ್ ಚೋರಿ ಕಹಾ ಹೈ? ಕಾಂಗ್ರೆಸ್ ಪಾರ್ಟಿ ಮೇ ಹೈ! ರಾಹುಲ್ ಗಾಂಧಿ ಈಗ ಬಾಗೇಪಲ್ಲಿಗೆ ಬಂದು ವೋಟ್ ಚೋರಿ, ಇಲೆಕ್ಷನ್ ಚೋರಿ ವಿರುದ್ಧ ಪ್ರತಿಭಟನೆ ಮಾಡ್ತಾರಾ? ಎಂದು ಪ್ರಶ್ನಿಸಿದ್ದಾರೆ. ನಮ್ಮ ದೇಶದಲ್ಲಿ ಮತಗಳ್ಳತನ, ಚುನಾವಣಾ ಅಕ್ರಮಕ್ಕೆ ಯಾರಾದರೂ ಪಿತಾಮಹ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಪೂರ್ವಜರು ಎಂದು ಲೇವಡಿ ಮಾಡಿದ್ದಾರೆ.
2023ರಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಎಸ್.ಎನ್.ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದ್ದು, ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಅಭ್ಯರ್ಥಿ ಮುನಿರಾಜು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
























