ನೌಕಾ ನೆಲೆಯ ರಹಸ್ಯ ಮಾಹಿತಿ ರವಾನೆ : ಇನ್ನೋರ್ವ ಆರೋಪಿ ಸೆರೆ

ಕೇರಳದ ವಯನಾಡಿನಲ್ಲಿ ಆರೋಪಿಯನ್ನು ಬಂಧಿಸಿ ಕರೆತಂದ ಪೊಲೀಸರು

ಉಡುಪಿ: ನೌಕಾ ನೆಲೆಯ ರಹಸ್ಯ ಮಾಹಿತಿಗಳನ್ನು ವಿದೇಶಕ್ಕಡ ರವಾನಿಸಿದ ಇನ್ನೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಕೇರಳದ ವಯನಾಡಿನಲ್ಲಿ ಬಂಧಿಸಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಡಗುಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ರವಾನಿಸಿದ ಪ್ರಕರಣದಲ್ಲಿ ಸೆರೆಯಾಗಿರುವ ಐದನೇ ಆರೋಪಿ ಈತ.

ಬಂಧಿತ ಆರೋಪಿಯನ್ನು ದಿ.ಇಜಾಜುಲ್ ಇಸ್ಲಾಂ ಎಂಬವರ ಪುತ್ರ ಅಲಿಫ್ ಇಸ್ಲಾಂ (21) ಎಂದು ಗುರುತಿಸಲಾಗಿದೆ. ಮೂಲತಃ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಬರ್ಗರಿಯಾ ಗ್ರಾಮದ ನಿವಾಸಿಯಾಗಿದ್ದ ಈತ ಪ್ರಸ್ತುತ ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್‌ನ ಮರಾಯು ಗ್ರಾಮದ ಕೋಕಿಲಕಟ್ಟಾದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಆದರೆ ಈತ ಬಾಂಗ್ಲಾದೇಶದ ಅಕ್ರಮ ವಲಸಿಗನಾಗಿರಬಹುದು ಎಂಬ ಅನುಮಾನ ಮೂಡಿದ್ದು, ಈ ನಿಟ್ಟಿನಲ್ಲೂ ತನಿಖೆ ನಡೆಯುತ್ತಿದೆ.





















































 
 

ಪೊಲೀಸರು ಆರೋಪಿಯನ್ನು ಫೆಬ್ರವರಿ 16ರಂದು ಬಂಧಿಸಿದರು. ಫೆಬ್ರವರಿ 17ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು ಮತ್ತು ಫೆಬ್ರವರಿ 21ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ಬಾಂಗ್ಲಾದೇಶಿ ಪ್ರಜೆ ಎಂದು ಶಂಕಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

error: Content is protected !!
Scroll to Top