ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ (ರಿ), ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ), ಮಂಗಳೂರು ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ, ಮಂಗಳೂರು ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇವುಗಳ ಸಹಯೋಗದೊಂದಿಗೆ ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ ಮತ್ತು ಉಚಿತ ಓದುವ ಕನ್ನಡಕ ವಿತರಣೆ ಕಾರ್ಯಕ್ರಮ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರಿನಲ್ಲಿ ನಡೆಯಲಿದೆ.

ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯಾಗಿದ್ದು, ಫೆ. 22 ರಂದು ಭಾನುವಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಈ ಕಾರ್ಯಕ್ರಮ ನಡೆಯಲಿದೆ.
ಸಾಮಾನ್ಯ ರೋಗ ವಿಭಾಗ, ಬಿ.ಪಿ. ಹಾಗೂ ಮಧುಮೇಹ ತಪಾಸಣೆ, ಎಲುಬು ಮತ್ತು ಕೀಲು ರೋಗ ವಿಭಾಗ, ಉಚಿತ ಲಭ್ಯ ಇರುವ ಔಷಧ ವಿತರಣೆ, ಕಿವಿ, ಮೂಗು ಮತ್ತು ಗಂಟಲು ವಿಭಾಗ, ವೈದ್ಯರು ಸೂಚಿಸಿದ್ದಲ್ಲಿ ಉಚಿತ ಇಸಿಜಿ ತಪಾಸಣೆ, ಕ್ಯಾನ್ಸರ್ ರೋಗ ತಪಾಸಣೆ ವಿಭಾಗ, ಸ್ತ್ರೀ ರೋಗ ವಿಭಾಗ, ಕಣ್ಣಿನ ವಿಭಾಗ, ಮಕ್ಕಳ ವಿಭಾಗ, ಹೃದಯ ರೋಗ ವಿಭಾಗ ಕೆಎಂಸಿ ಆಸ್ಪತ್ರೆಯ ಬಾಯಲ್ಲಿ ಕಾರ್ಡಿನ ನೋಂದಾವಣೆ ಮುಂತಾದ ತಪಾಸಣೆಗಳನ್ನು ಹಾಗೂ ಮಾಹಿತಿಗಳನ್ನು ಕೆಎಂಸಿ ಆಸ್ಪತ್ರೆಯ ನುರಿತ ತಜ್ಞ ವೈದ್ಯರುಗಳ ಮಾರ್ಗದರ್ಶನದಲ್ಲಿ ನಡೆಸಲಾಗುತ್ತದೆ.
ಸಾರ್ವಜನಿಕರು ಈ ಕಾರ್ಯಕ್ರಮದ ಸಂಪೂರ್ಣ ಪ್ರಯೋಜನ ಪಡೆಯುವ ಮೂಲಕ ಈ ಆರೋಗ್ಯ ಶಿಬಿರವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ತಿಳಿಸಿದ್ದಾರೆ.
























