ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಗುರುವಾರ ಸಂಜೆ ತನಕ ಸರ್ಕಾರಕ್ಕೆ ಡೆಡ್‌ಲೈನ್‌

ಬೃಹತ್‌ ಮುಷ್ಕರಕ್ಕೆ ಸಜ್ಜಾಗುತ್ತಿರುವ ಕೆಎಸ್‌ಆರ್‌ಟಿಸಿ ನೌಕರರು; ಸಂಚಾರ ವ್ಯತ್ಯಯ ಸಾಧ್ಯತೆ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬೃಹತ್‌ ಮುಷ್ಕರಕ್ಕೆ ಮುಂದಾಗಿದ್ದು, ಗುರುವಾರ ಸಂಜೆ ಬಳಿಕ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ.

ಸಾರಿಗೆ ನೌಕರರು ನಾಳೆ ‘ಬೆಂಗಳೂರು ಚಲೋ’ ಕೈಗೊಂಡು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ 4 ನಿಗಮದ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.





















































 
 

ನಾಳೆ ಸಂಜೆ 4 ಗಂಟೆವರೆಗೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಲಾಗಿದೆ. ಬೇಡಿಕೆ ಸಂಬಂಧ ನಿರ್ಣಯ ಕೈಗೊಳ್ಳದಿದ್ದರೆ ಸಾರಿಗೆ ಬಂದ್ ಆಗಲಿದೆ. ಸರ್ಕಾರದಿಂದ ಅಧಿಕೃತ ನಿರ್ಧಾರ ಬಾರದಿದ್ದರೆ ಬಂದ್ ಮಾಡುವುದಾಗಿ ಸಾರಿಗೆ ನೌಕರರು ಎಚ್ಚರಿಸಿದ್ದಾರೆ. ಗುರುವಾರ ಸಂಜೆ ಬಳಿಕ ಬಸ್ ಸಂಚಾರ ನಿಲ್ಲಿಸಲು ನೌಕರರು ನಿರ್ಧರಿಸಲಿದ್ದಾರೆ.

ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ. ಕೆಲಸಕ್ಕೆ ಹಾಜರಾಗದಿದ್ದರೆ ನೋ ಪೇಮೆಂಟ್, ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ. ಪ್ರತಿಭಟನೆಯಲ್ಲಿ ಭಾಗಿಯದರೆ ಸೇವಾ ನಿಯಮದ ಅನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಎಂಡಿ ಅಕ್ರಮ್ ಪಾಷಾ ಎಚ್ಚರಿಕೆ ನೀಡಿದ್ದಾರೆ.

error: Content is protected !!
Scroll to Top