ಬೆಂಗಳೂರು: ರಾಜ್ಯ ಸರ್ಕಾರದ ಮೇಲೆ ಕಿಡಿ ಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಇದೊಂದು ಅಯೋಗ್ಯ ಸರ್ಕಾರ ಎಂದು ಹೇಳಿದ್ದಾರೆ.
ವಿಧಾನ ಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವುದನ್ನು ಖಂಡಿಸಿದ ಅವರು ಇದೊಂದು ನಾಲಾಯಕ್ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ನದ್ದು ಪ್ರಜಾಪ್ರಭುತ್ವವನ್ನು ಅಣಕಿಸುವ ನಡೆ ಎಂದು ಟೀಕಿಸಿರುವ ಅವರು, ಮಾಧ್ಯಮ ನಿರ್ಬಂಧ ಒಂದು ಪ್ರಜಾಪ್ರಭುತ್ವದ ವಿರೋಧಿ ನಡೆ. ಅಧಿವೇಶನದಲ್ಲಿ ದ್ವೇಷ ಭಾಷಣ ವಿರೋಧಿ ಕಾಯ್ದೆ ಜಾರಿಗೆ ತಂದ ಕಾಂಗ್ರೆಸ್ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಾಕ್ ಪರ ಘೋಷಣೆಗಳನ್ನು ಹಾಕಿಕೊಂಡು ಓಡಾಡುವ ಜನರಿದ್ದಾರೆ. ಅಂತಹ ವಿಷಯಗಳನ್ನು ನಿಲ್ಲಿಸುವುದು ಬಿಟ್ಟು ಮಾಧ್ಯಮಗಳನ್ನು ವಿಧಾನಸೌಧದಲ್ಲಿ ನಿರ್ಬಂಧಿಸಿದ್ದಾರೆ. ಇದನ್ನು ನಾವು ಸಮ್ಮತಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
























