ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕ ದ್ರವ್ಯ ಕೊಕೇನ್ ಸಾಗಾಟ ಮಾಡುತ್ತಿದ್ದ ಬ್ರೆಜಿಲ್ ಪ್ರಜೆಯನ್ನು NCB ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನಿಂದ 23.88 ಕೋಟಿ ರೂ. ಮೌಲ್ಯದ 4.776 KG ಕೊಕೇನ್ ಅನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಸಾವೊಪಾಲೊದಿಂದ ದೋಹಾಗೆ ಮತ್ತು ಅಲ್ಲಿಂದ ಬೆಂಗಳೂರಿಗೆ ಪ್ರಯಾಣಿಸಿದ್ದ ಎಂದು ತಿಳಿದು ಬಂದಿದೆ.
ಆರೋಪಿ ಚೆಕ್ ಇನ್ ಮಾಡಿದ ಸಾಮಗ್ರಿಗಳ ಪರಿಶೀಲನೆ ನಡೆಸಿದಾಗ ಅದರಲ್ಲಿ ಕೊಕೇನ್ ಇದ್ದು, ಅದನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
























