ಮಂಗಳೂರು: ಬಿಎಸ್ಎನ್ಎಲ್ ಕಚೇರಿಯ ಅಧಿಕಾರಿಗಳೇ 70 ಲಕ್ಷ ಮೌಲ್ಯದ ಕಾಪರ್ ಕೇಬಲ್ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಪ್ರಕರಣ ಸಂಬಂಧ ಮಂಗಳೂರು ದಕ್ಷಿಣ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಿಎಸ್ಎನ್ಎಲ್ ಅಸಿಸ್ಟೆಂಟ್ ಆಫೀಸ್ ಸೂಪರಿಂಟೆಂಡೆಂಟ್ ತನ್ವೀರ್ ಪಾಷಾ(50), ಟೆಲಿಕಾಂ ಟೆಕ್ನಿಶಿಯನ್ ಕೆ.ಕೆ.ಚಾಮಿ(59) ಹಾಗೂ L&T ಕಂಪನಿ ಕೇಬಲ್ ಜಾಯಿಂಟರ್ ಡಿ.ಮಂಜುನಾಥ್ ಬಂಧಿತರಾಗಿದ್ದಾರೆ. ಆರೋಪಿಗಳಿಂದ 2.5 ಲಕ್ಷ ರೂ. ಮೌಲ್ಯದ ಕಾಪರ್ ಕೇಬಲ್ ಮತ್ತು 10 ಲಕ್ಷ ನಗದನ್ನು ವಶಕ್ಕೆ ಪಡೆಯಲಾಗಿದೆ.
ಮಂಗಳೂರು : ಬಿಎಸ್ಎನ್ಎಲ್ ಅಧಿಕಾರಿಗಳಿಂದಲೇ ಕಾಪರ್ ಕೇಬಲ್ ಕಳವು

