ಉಡುಪಿ: ದನ ಕರುಗಳನ್ನು ಕಳವು ಮಾಡಿ ಅವುಗಳನ್ನು ಕಸಾಯಿಖಾನೆಗೆ ಮಾರಲು ಪ್ರಯತ್ನಿಸುತ್ತಿದ್ದ ಇಬ್ಬರು ಖದೀಮ ಗೋಕಳ್ಳರನ್ನು ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಪೆರ್ಡೂರಿನ ರಾಘವೇಂದ್ರ ಮತ್ತು ಕುಂಜದಕಟ್ಟೆ ನಿವಾಸಿ ಸುಧೀಂದ್ರ ಶೆಟ್ಟಿ ಎಂದು ಗುರುತಿಸಲಾಗಿದೆ.
ಪೆರ್ಡೂರು ದೇಗುಲದ ಸಮೀಪದ ಹೊಲದಿಂದ ಗೋವುಗಳನ್ನು ಕಳ್ಳತನ ಮಾಡಿ, ರಿಕ್ಷಾ ಮೂಲಕ ಅವುಗಳನ್ನು ಸಾಗಿಸಲು ಈ ಇಬ್ಬರು ಕಳ್ಳರು ಪ್ರಯತ್ನ ಮಾಡಿದ್ದಾರೆ. ಹಿರಿಯಡ್ಕ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿ ರಿಕ್ಷಾವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
























