ಶಿಬಾಜೆ ಶ್ರೀಧರ ಕೊಲೆ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ

ನಾಲ್ಕು ವರ್ಷದ ಹಿಂದೆ ಶಿಬಾಜೆಯ ತೋಟದಲ್ಲಿ ಕೊಲೆಯಾಗಿದ್ದ ಶ್ರೀಧರ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ‌ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್ ನೇತೃತ್ವದಲ್ಲಿ ರಚನೆಯಾಗಿರುವ ಎಸ್‌ಐಟಿ ತಂಡದಲ್ಲಿ ಉಡುಪಿ ಜಿಲ್ಲಾ ಎಸ್‌ಪಿ ಹರಿರಾವ್ ಶಂಕರ್, ಡಿವೈಎಸ್‌ಪಿ ಎಂ.ಆರ್ ಹರೀಶ್ ಅವರಿದ್ದಾರೆ.

2022ರ ಡಿ‌.18ರಂದು ಶಿಬಾಜೆಯ ತೋಟದ ಒಳಗೆ ಶ್ರೀಧರನ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ಹಲವಾರು ಪ್ರಭಾವಿಗಳು ಭಾಗಿಯಾಗಿರುವ ಆರೋಪ ಆರಂಭದಿಂದಲೂ ಕೇಳಿ ಬಂದಿತ್ತು ಈ ಹಿನ್ನೆಲೆಯಲ್ಲಿ ಬೆಳ್ತಂಗಡಿಯ ದಲಿತ ಸಂಘಟನೆಗಳು ಬೃಹತ್ ಹೋರಾಟಗಳನ್ನು ನಡೆಸಿದ್ದವು. ಆದರೆ ಶ್ರೀಧರ ಅವರಕೊಲೆ ಪ್ರಕರಣದ ಆರೋಪಿಗಳು ಪತ್ತೆಯಾಗಲೇ ಇಲ್ಲ.





















































 
 

ಪೊಲೀಸ್ ತನಿಖೆ ಸಮರ್ಪಕವಾಗಿ ತನಿಖೆ ನಡೆಸದ ಹಿನ್ನೆಲೆಯಲ್ಲಿ ಹರೀಶ್ ಮುಗೇರ ಎಂಬವರು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿ ಪ್ರಕರಣದ ಮರಯ ತನಿಖೆ ನಡೆಸುವಂತೆ ಕೋರಿದ್ದರು. ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ಬಳಿಕ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಅದರಂತೆ ಇದೀಗ ರಾಜ್ಯ ಸರಕಾರ ವಿಶೇಷ ತನಿಖಾ ತಙಡವನ್ನು ರಚಿಸಿ ಆದೇಶ ಹೊರಡಿಸಿದೆ.

error: Content is protected !!
Scroll to Top