ಮಕ್ಕಳನ್ನು ಸೋಷಿಯಲ್ ಮೀಡಿಯಾ, ಡ್ರಗ್ಸ್‌ನಿಂದ ದೂರವಿಡಲು ಮೊಬೈಲ್ ನಿಷೇಧಕ್ಕೆ ಚಿಂತನೆ
ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿದ್ದರಾಮಯ್ಯ ವಿವಿಗಳ ಕುಲಪತಿಯಾಗಿರುವ ರಾಜ್ಯಪಾಲರ ಅಭಿಪ್ರಾಯ ಕೇಳಿದ್ದಾರೆ. ಸಿಎಂ ಪ್ರಸ್ತಾಪಕ್ಕೆ ರಾಜ್ಯಪಾಲರೂ ಒಪ್ಪಿಗೆ ಸೂಚಿಸಿದ್ದಾರೆ.
ಇಂದಿನ ದಿನಗಳಲ್ಲಿ ಯುವಜನರು ಡ್ರಗ್ಸ್‌ಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್ ಮಾಡುವ ಚಿಂತನೆ ಇದೆ. ಈ ಬಗ್ಗೆ ನಮಗೆ ಸಲಹೆ ಕೊಡಿ. ಇದು ವಯಸ್ಕರಿಗೆ ಅಲ್ಲ, 16 ವರ್ಷದೊಳಗಿನ ವಿದ್ಯಾರ್ಥಿಗಳ ಫೋನ್ ಬ್ಯಾನ್ ಮಾಡುವ ಚಿಂತನೆ. ಆಸ್ಟ್ರೇಲಿಯಾ ಸೇರಿ ಅನೇಕ ದೇಶಗಳಲ್ಲಿ ಇದನ್ನ ಮಾಡಿದ್ದಾರೆ. ಸೋಷಿಯಲ್ ಮೀಡಿಯಾಗಳಿಂದ ವಿದ್ಯಾರ್ಥಿಗಳು ಹಾಳಾಗುತ್ತಾ ಇದ್ದಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ಸಿಎಂ ಪ್ರಸ್ತಾಪಿಸಿದ್ದಾರೆ.
ಇದಕ್ಕೆ ಸಹಮತ ವ್ಯಕ್ತಪಡಿಸಿದ ರಾಜ್ಯಪಾಲರು 16 ವರ್ಷ ಒಳಗಿನ ವಿದ್ಯಾರ್ಥಿಗಳಿಗೆ ಶಾಲಾ–ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವಂತೆ ಸಲಹೆ ನೀಡಿದರು. ಡ್ರಗ್ಸ್ ಒಂದು ಪಿಡುಗು ಆಗಿದೆ. ವಿವಿ ಕ್ಯಾಂಪಸ್‌ಗಳು ಡ್ರಗ್ಸ್‌ಮುಕ್ತ ಆಗಬೇಕು. ಡ್ರಗ್ಸ್ ಮಾಫಿಯಾಗಳಿಗೆ ಕಡಿವಾಣ ಹಾಕಬೇಕು ಎಂದು ಸಿಎಂ ಸೂಚನೆ ನೀಡಿದರು.
























