ಅಕ್ರಮವಾಗಿ ಸಾಗಿಸುತ್ತಿದ್ದ 35 ಜಾನುವಾರುಗಳ ರಕ್ಷಣೆ

ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕದ್ರಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದಾರೆ. ಮಂಗಳೂರು ಪಡವು ಹೈವೇ ಬಳಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಂಟೈನರ್ ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ ವೇಳೆ 35 ಜಾನುವಾರುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

ಬಜರಂಗದಳ ಕಾರ್ಯಕರ್ತರು ನೀಡಿದ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಾಹನವನ್ನು ತಡೆದರು. ಪರಿಶೀಲನೆಯ ವೇಳೆ ಯಾವುದೇ ಸಮರ್ಪಕ ದಾಖಲೆಗಳಿಲ್ಲದೆ ಜಾನುವಾರುಗಳನ್ನು ಸಾಗಿಸಲಾಗುತ್ತಿದ್ದುದಾಗಿ ತಿಳಿದುಬಂದಿದೆ.

ಜಾನುವಾರುಗಳನ್ನು ರಕ್ಷಿಸಿ ಸಂಬಂಧಿತ ಇಲಾಖೆಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.





















































 
 
error: Content is protected !!
Scroll to Top