ತಮಿಳುನಾಡಿನ ಉಡುಪು ಉತ್ಪಾದನಾ ಘಟಕದಲ್ಲಿ ಉದ್ಯೋಗದಲ್ಲಿದ್ದ ಶಂಕಿತರು
ನವದೆಹಲಿ: ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ ಐಸಿಸ್ ಮತ್ತು ಬಾಂಗ್ಲಾದೇಶದೊಂದಿಗೆ ಸಂಪರ್ಕ ಹೊಂದಿರುವ 8 ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಉಡುಪು ಉತ್ಪಾದನಾ ಘಟಕಗಳಿಂದ ಮಿಜಾನೂರ್ ರೆಹಮಾನ್, ಮೊಹಮ್ಮದ್ ಶಬತ್, ಉಮರ್, ಮೊಹಮ್ಮದ್ ಲಿಟನ್, ಮೊಹಮ್ಮದ್ ಶಾಹಿದ್ ಮತ್ತು ಮೊಹಮ್ಮದ್ ಉಜ್ಜಲ್ ಎಂಬ ಆರು ಶಂಕಿತರನ್ನು ಬಂಧಿಸಲಾಗಿದ್ದು, ಇಬ್ಬರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಬಂಧಿತ ಶಂಕಿತರಲ್ಲಿ ಬಾಂಗ್ಲಾದೇಶಿ ಪ್ರಜೆಯೂ ಸೇರಿದ್ದಾರೆ.
ಆರೋಪಿಗಳು ಗುರುತಿನ ಚೀಟಿಗಾಗಿ ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸುತ್ತಿದ್ದರು. ಶಂಕಿತರಿಂದ ಎಂಟು ಮೊಬೈಲ್ ಫೋನ್‌ಗಳು ಮತ್ತು 16 ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮಿಳುನಾಡು ಪೊಲೀಸರು ಶಂಕಿತರನ್ನು ಬಂಧಿಸಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
























