ವಿಟ್ಲ: ನಗರದ ಕೊಡಂಗಾಯಿ ಬಳಿಯ ಮೂರುಕಜೆಯ ವಿದ್ಯಾ ಸಂಸ್ಥೆಯೊಂದರ ಹತ್ತನೇ ತರಗತಿಯ ವಿದ್ಯಾರ್ಥಿನಿಯ ಶವ ಕೆರೆಯಲ್ಲಿ ಪತ್ತೆಯಾಗಿದೆ.
ಬೆಂಗಳೂರು ಮೂಲದ ವೈಗಲಕ್ಷ್ಮೀ ಎಂಬಾಕೆಯೇ ಮೃತ ವಿದ್ಯಾರ್ಥಿನಿ. ಆಕೆ ನಿನ್ನೆಯಿಂದ ನಾಪತ್ತೆಯಾಗಿದ್ದು, ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷಾ ಹಿನ್ನೆಲೆಯಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
























