ಬಸ್ಸಿನಲ್ಲಿ ಅಸ್ವಸ್ಥರಾದ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ ಚಾಲಕ

ಪುತ್ತೂರು:‌ ಪುತ್ತೂರಿನಿಂದ ‌ವಿಟ್ಲಕ್ಕೆ ಸಂಚರಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಏಕಾಏಕಿ ಅಸ್ವಸ್ಥರಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಅವರಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆತಿದೆ.

ಅನಾರೋಗ್ಯಕ್ಕೆ ತುತ್ತಾದ ಪ್ರಯಾಣಿಕ ಬಸ್ಸಿನಲ್ಲೇ ಕೆಳಕ್ಕೆ ಬಿದ್ದು, ಗಾಯಗಳಾಗಿವೆ. ಈ ಘಟನೆ ನಡೆದಾಕ್ಷಣದಲ್ಲೇ ಎಚ್ಚೆತ್ತ ಚಾಲಕ ಬಸ್ಸನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಅಸ್ವಸ್ಥ ವ್ಯಕ್ತಿಗೆ ಚಿಕಿತ್ಸೆ ಕೊಡಿಸಿದ್ದಾರೆ.

ಬಸ್ ಚಾಲಕನ ಸಮಯಪ್ರಜ್ಞೆ ಮತ್ತು ಮಾನವೀಯತೆಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.





















































 
 

error: Content is protected !!
Scroll to Top