ಅಜೀಮ್‌ ಪ್ರೇಮ್‌ಜಿ ವಿವಿ ವಿರುದ್ಧ ದೇಶ ವಿರೋಧಿ ಚಟುವಟಿಕೆ ಆರೋಪ

ಮಾನ್ಯತೆ ರದ್ದುಪಡಿಸಲು ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ

ಬೆಂಗಳೂರು: ಸರ್ಜಾಪುರದಲ್ಲಿರುವ ಪ್ರತಿಷ್ಠಿತ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಮಂಗಳವಾರ ವಿವಿಯೊಳಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ.

ಸಂಜೆ ವಿವಿ ಆವರಣಕ್ಕೆ ನುಗ್ಗಿದ ಎಬಿವಿಪಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ವಿವಿಯ ನಾಮಫಲಕಕ್ಕೆ ಕಪ್ಪುಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಸರ್ಜಾಪುರ ಪೊಲೀಸರು ತೆರಳಿ ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೂ ಪತ್ರ ಬರೆದಿರುವ ಎಬಿವಿಪಿ, ಅಜೀಂ ಪ್ರೇಮ್‌ಜಿ ವಿವಿಯ ಮಾನ್ಯತೆ ರದ್ದುಪಡಿಸಬೇಕೆಂದು ಒತ್ತಾಯಿಸಿದೆ.





















































 
 

AISA ಪ್ರಾಯೋಜಿತ SPARK ಎನ್ನುವ ಸಂಸ್ಥೆಯ ಮೂಲಕ ಅಜೀಮ್ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ದೇಶವಿರೋಧಿ ಚಿಂತನೆಗಳ ಕೂಟಗಳನ್ನು ನಡೆಸಲಾಗಿದೆ. ಸೈನಿಕರನ್ನು ಅತ್ಯಾಚಾರಿಗಳು, ಹಿಂಸಾಚಾರಿಗಳು ಎನ್ನುವಂತೆ ಬಿಂಬಿಸುವ ಕಾರ್ಯಕ್ರಮ ಮಾಡಿದ್ದಾರೆ. ಭಾರತದ ಮುಕುಟಮಣಿ ಕಾಶ್ಮೀರ ಭಾರತದ ಭಾಗವಲ್ಲ, ಕಾಶ್ಮೀರವನ್ನು ಸ್ವತಂತ್ರಗೊಳಿಸಿ ಎನ್ನುವ ದೇಶ ವಿರೋಧಿ ಕಾರ್ಯಕ್ರಮಗಳ ಮೂಲಕ ಭಾರತದ ಸಮಗ್ರತೆಗೆ ಧಕ್ಕೆ ತರುವ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಅಪರೇಷನ್ ಸಿಂಧೂರ ಸೈನಿಕ ಕಾರ್ಯಾಚರಣೆಯನ್ನು ಖಂಡಿಸುವ ಚಟುವಟಿಕೆಗಳು ನಡೆಸುತ್ತಿದ್ದರು. ನಕ್ಸಲ್‌ವಾದ ಹಾಗೂ ಮಾವೋವಾದಿಗಳನ್ನು ಬೆಂಬಲಿಸಿ ಕಾರ್ಯಕ್ರಮಗಳನ್ನು ನಡೆಸುತ್ತಾ ಇದ್ದರು ಎಂದು ಎಬಿವಿಪಿ ಆರೋಪಿಸಿದೆ.

error: Content is protected !!
Scroll to Top