ಪಿಯುಸಿ ಪರೀಕ್ಷೆ ಆರಂಭವಾಗುವ ಹೊತ್ತಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕ

ಇನ್‌ಸ್ಟಾಗ್ರಾಂನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಪೋಸ್ಟ್‌ ಹಾಕಿದ ಕಿಡಿಗೇಡಿ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಶುರುವಾಗಲು ಇನ್ನೆರಡು ದಿನ ಬಾಕಿಯಿರುವಾಗಲೇ ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕ ಮತ್ತೆ ಎದುರಾಗಿದೆ. ಫೆಬ್ರವರಿ 28ರಿಂದ ಪರೀಕ್ಷೆಗಳು ಶುರುವಾಗಲಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಬಗ್ಗೆ ಪೋಸ್ಟ್ ಒಂದು ಹರಿದಾಡುತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ.

‘ಡಾ. ಕನ್ನಡಿಗ’ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವುದಾಗಿ ಪೋಸ್ಟ್ ಮಾಡಿದ್ದಾನೆ. ಯಾವುದಾದರೂ ಪ್ರಶ್ನೆ ಪತ್ರಿಕೆ ಬೇಕು ಅಂದ್ರೆ ಮೆಸೇಜ್ ಮಾಡಿ. ಅಮೌಂಟ್ ಎಷ್ಟು ಅಂತ ಆಮೇಲೆ ಹೇಳ್ತಿನಿ ಎಂದು ಈ ಕಿಡಿಗೇಡಿ ಬರೆದುಕೊಂಡಿದ್ದಾನೆ. ಈ ಪೋಸ್ಟ್‌ ವಿದ್ಯಾರ್ಥಿಗಳಿಗೆ ಭಯ ಹುಟ್ಟಿಸಿದೆ ಹಾಗೂ ಪರೀಕ್ಷಾ ಮಂಡಳಿಯ ಕೂಡ ಆತಂಕಕ್ಕೆ ಕಾರಣವಾಗಿದೆ.





















































 
 

ಈ ಕಿಡಿಗೇಡಿ ಯಾವ ವಿಷಯದ ಪ್ರಶ್ನೆ ಪತ್ರಿಕೆ ಎಂಬ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಪರೀಕ್ಷೆಯ ಸಮಯದಲ್ಲಿ ಇಂತಹ ಕಿಡಿಗೇಡಿಗಳು ಹಣ ಮಾಡುವ ಉದ್ದೇಶದಿಂದ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಅಥವಾ ನಕಲಿ ಪತ್ರಿಕೆಗಳನ್ನು ನೀಡಿ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಸಾಧ್ಯತೆ ಹೆಚ್ಚು. ಇಂತಹ ಜಾಲಗಳಿಗೆ ಸಿಲುಕಿ ಹಣ ಕಳೆದುಕೊಳ್ಳಬೇಡಿ ಮತ್ತು ನಿಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಇಲಾಖೆ ಹೇಳಿದೆ.

error: Content is protected !!
Scroll to Top