ಬೆಂಗಳೂರು: ಸಿ ಎಂ ಆಯ್ಕೆ ವಿಷಯ ಹೈಕಮಾಂಡ್‌ಗೆ ಬಿಟ್ಟಿದ್ದು. ಅದರಲ್ಲಿ ಯಾವುದೇ ರೀತಿಯಲ್ಲಿ ತಾವು ಲಾಬಿ ನಡೆಸಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಸಿ ಎಂ ಆಗಬೇಕು ಎನ್ನುವ ಅಭಿಮಾನಿಗಳು ಕೂಗುತ್ತಿರುವ ಘೋಷಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ವಿಷಯದಲ್ಲಿ ಯಾವ ಗೊಂದಲಕ್ಕೂ ಒಳಗಾಗಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹಾಗೆಯೇ ನವದೆಹಲಿಗೆ ಹೋಗಿ ನಾನು ಯಾರನ್ನೂ ಭೇಟಿ ಮಾಡಿಲ್ಲ. ಕೆಲವರು ವ್ಯಕ್ತಪಡಿಸುವ ಅಭಿಪ್ರಾಯಗಳಿಗೆ ತಾವೇನೂ ಮಾಡಲು ಸಾಧ್ಯವಿಲ್ಲ. ಇಂತಹ ಚರ್ಚೆಗೆ ನಾನು ಕೈಜೋಡಿಸುವುದಿಲ್ಲ ಎಂದಿದ್ದಾರೆ.
ಈ ವೇಳೆ ರಾಜ್ಯದಲ್ಲಿ ಕಾಣೆಯಾದ 15 ಸಾವಿರ ಮಕ್ಕಳ ಬಗೆಗೂ ಮಾತನಾಡಿದ ಅವರು, ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಎಲ್ಲಾ ಪ್ರಕರಣಗಳಿಗೂ ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ.
























