ನಿಂತಿದ್ದ ಲಾರಿಗೆ ಗುದ್ದಿದ ಕಾರು: ಮೂರು ಮಂದಿ ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಢಿಕ್ಕಿಯಾಗಿ ಒಂದೇ ಕುಟುಂಬದ ಮೂರು ಮಂದಿ ಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಸಮೀಪ ನಡೆದಿದೆ.

ಒಂದೇ ಕುಟುಂಬದ ಐದು ಜನರು ಮಂತ್ರಾಲಯಕ್ಕೆ ತೆರಳಿ ಮರಳುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ರಾಯರ ದರ್ಶನ ಪಡೆದು ಹಿಂದಿರುಗುತ್ತಿದ್ದ ಸಮಯದಲ್ಲಿ ಭೀಕರ ಅಪಘಾತ ನಡೆದಿರುವುದಾಗಿದೆ. ಕಾರು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಮೃತರನ್ನು ಗುಬ್ಬಿ ತಾಲೂಕಿನ ಹೊಸಕೆರೆ ಗ್ರಾಮದ ನರಸಿಂಹ ಮೂರ್ತಿ, ಗಂಗಾಧರ್ ಮತ್ತು ಲೋಹಿತ್ ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಚಾಲಕನ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯ ತಲೆ ದೇಹದಿಂದ ಬೇರ್ಪಟ್ಟಿದೆ, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.





















































 
 

ಕಾರ್‌ನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಪ್ರಮಾಣದ ಗಾಯಗಳಾಗಿವೆ.

error: Content is protected !!
Scroll to Top