ಹಾಲು ಕಲಬೆರಕೆ ದಂಧೆ ನಡೆಸುತ್ತಿದ್ದ ಆರೋಪಿಗಳ ಬಂಧನ

ಕೋಲಾರ: ಹಾಲು ಕಲಬೆರಕೆ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.

ಜಿಲ್ಲೆಗೆ ಹೊಂದಿಕೊಂಡಂತೆ ಇರುವ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ರಾಜ್ಯಗಳ‌ ಕೆಲವು ವ್ಯಕ್ತಿಗಳು ಮತ್ತು ಖಾಸಗಿ ಡೈರಿಗಳು ಹಾಲು ಕಲಬೆರಕೆ ಅಡ್ಡಾಗಳನ್ನು ನಿರ್ಮಾಣ ಮಾಡಿಕೊಂಡು ಜನರ ಜೀವದ ಜೊತೆಗೆ ಚೆಲ್ಲಾಟ ಆಡುತ್ತಿದ್ದರು.

ಈ ವಿಷಯ ತಿಳಿದ ಡಿಸಿ ಒಂದೇ ಸಮಯಕ್ಕೆ ಸುಮಾರು 32 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಸುಮಾರು 42 ರಷ್ಟು ಹಾಲಿನ ಮಾದರಿ ಸಂಗ್ರಹ ಮಾಡಿದ್ದರು.





















































 
 

ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಎಂಟು ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಲು ಕಲಬೆರಕೆ ದಂಧೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು, ಅದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ.

error: Content is protected !!
Scroll to Top