ಬಂಟ್ವಾಳ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಪ್ರಕರಣ ದಾಖಲಾದ ವಿಷಯಕ್ಕೆ ಸಂಬಂಧಿಸಿದ ಹಾಗೆ ಅನುಮಾನಾಸ್ಪದ ಆರೋಪಿಯ ಮುಖಚಹರೆ ಪತ್ತೆಯಾಗಿದೆ. ಈ ಹಿನ್ನೆಲೆ ಆತನ ಪತ್ತೆಗೆ ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಪ್ರಕರಣದ ತನಿಖಾ ವೇಳೆ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಅನುಮಾನಿತ ಆರೋಪಿಯ ಮುಖಚಹರೆ ಪತ್ತೆಯಾಗಿರುವುದಾಗಿದೆ. ಆ ವ್ಯಕ್ತಿಯ ಬಗ್ಗೆ ಯಾವುದೇ ರೀತಿಯ ಮಾಹಿತಿ ಇದ್ದಲ್ಲಿ ಅಥವಾ ಸುಳಿವು ಸಿಕ್ಕಲ್ಲಿ ಪೊಲೀಸರ ಗಮನಕ್ಕೆ ತರುವಂತೆ ಸೂಚಿಸಲಾಗಿದೆ.
ಮಾಹಿತಿ ನೀಡುವವರು ಕೆಳಗಿನ ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
ಜಿಲ್ಲಾ ಕಂಟ್ರೋಲ್ ರೂಂ: 0824 2220500, 94808053000
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ: 08255-235000, 9480805368
ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
























