ದ್ವಿತೀಯ ಪಿಯುಸಿ ಪರೀಕ್ಷಾ ಹಿನ್ನೆಲೆ ಪರೀಕ್ಷಾ ಬೋರ್ಡ್‌ನಿಂದ ‌ಕಠಿಣ ಕ್ರಮ

ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಈ ಸಮಯದಲ್ಲಿ ಯಾವುದೇ ಪರೀಕ್ಷಾ ಅಕ್ರಮ ನಡೆಯದಂತೆ ಎಕ್ಸಾಂ ಬೋರ್ಡ್ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ.

ಪರೀಕ್ಷಾ ಬೋರ್ಡ್ ಕೈಗೊಂಡ ಕ್ರಮಗಳ ಪಟ್ಟಿ ಈ ಕೆಳಗಿನಂತಿವೆ:

  • ಪರೀಕ್ಷೆ ನಡೆಯುವ ದಿನದಿಂದ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ.
  • ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಕಂಪ್ಯೂಟರ್ ಶಾಪ್ ಕ್ಲೋಸ್‌ಗೆ ಕ್ರಮ.
  • ಹಿಂದಿನ ಪರೀಕ್ಷೆಗಳಲ್ಲಿ ಅಕ್ರಮದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಮೇಲೆ ಪೊಲೀಸ್ ಇಲಾಖೆಯಿಂದ ವಿಶೇಷ ನಿಗಾ.
  • ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ.
  • ಸುಳ್ಳು ಸುದ್ದಿ ಹರಡಿಸುವ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಲು ಪೊಲೀಸ್ ಇಲಾಖೆ ನೇತೃತ್ವದಲ್ಲಿ ವಿಶೇಷ ತಂಡದ ರಚನೆ.
  • ಇಡೀ ಪರೀಕ್ಷಾ ವ್ಯವಸ್ಥೆ ಮಾನಿಟರ್ ಮಾಡಲು ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ, ಪ್ರತಿ ಜಿಲ್ಲೆ ಡಿಸಿಗಳು, ಎಸ್ಪಿಗಳು ಮಾನಿಟರ್ ಮಾಡಲು ವ್ಯವಸ್ಥೆ.
  • ಪ್ರಶ್ನೆಪತ್ರಿಕೆ ಖಜಾನೆಯಿಂದ ಕೇಂದ್ರಗಳಿಗೆ ಹೋಗುವಾಗ ಬಿಗಿ ಪೊಲೀಸ್ ಭದ್ರತೆ, ಪ್ರಶ್ನೆಪತ್ರಿಕೆ ರವಾನೆ ವಿಡಿಯೋ ಚಿತ್ರೀಕರಣದ ವ್ಯವಸ್ಥೆ.
  • ನಿಗದಿ ಮಾಡಿದ ಸಮಯಕ್ಕಿಂತ ಮೊದಲು ಪ್ರಶ್ನೆಪತ್ರಿಕೆ ಖಜಾನೆಯಿಂದ ಓಪನ್ ಮಾಡುವಂತೆ ಇಲ್ಲ. ಅಂತಹ ಘಟನೆ ಕಂಡುಬಂದರೆ ಜವಾಬ್ದಾರಿ ಕೊಟ್ಟಿರುವವರ ಮೇಲೆ ಕಾನೂನು ಕ್ರಮ.
  • ಪ್ರಶ್ನೆಪತ್ರಿಕೆ ಜವಾಬ್ದಾರಿವಹಿಸಿರುವವರು ಅಕ್ರಮದಲ್ಲಿ ಭಾಗಿಯಾದಲ್ಲಿ ಕಾನೂನು ಕ್ರಮದ ಎಚ್ಚರಿಕೆ.
  • ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿಗಳಿಗೆ, ಅಧಿಕಾರಿಗಳಿಗೆ ಸಂಪೂರ್ಣ ಫೋನ್ ನಿಷೇಧ.
  • ಪರೀಕ್ಷಾ ಕೇಂದ್ರಗಳಿಗೆ ವಾಚ್ ಸೇರಿ ಎಲೆಕ್ಟ್ರಾನಿಕ್ ಉಪಕರಣಗಳು ನಿಷೇಧ.
  • ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಭದ್ರತೆ, ಜಿಲ್ಲೆಗಳಲ್ಲಿ ಎಸ್ಪಿ, ಡಿಸಿಗಳ ನೇತೃತ್ವದಲ್ಲಿ ಭರವಸೆ.
  • ಪ್ರತಿ ಕೇಂದ್ರದಲ್ಲಿ ಸಿಟ್ಟಿಂಗ್ ಸ್ಕ್ವಾಡ್, ಫ್ಲೈಯಿಂಗ್ ಸ್ಕ್ವಾಡ್ ನಿಯೋಜನೆ., ಪ್ರತಿ ಕೇಂದ್ರದಲ್ಲಿ ಪೊಲೀಸರ ವ್ಯವಸ್ಥೆ.





















































error: Content is protected !!
Scroll to Top