ಹಾಸನ: ಅತಿ ವೇಗದಿಂದ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದ್ದು, ಗುದ್ದಿದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಕಲೇಶಪುರದ ಗುಲಗಳಲೆಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ.
ಕಾರು ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.
ಮೃತಪಟ್ಟವರು ತಮಿಳುನಾಡು ಮತ್ತು ಕೆಜಿಎಫ್ ಮೂಲದವರೆಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
























