ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಬೆಳಗಾವಿ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಚ ಘಟನೆ ಚಿಕ್ಕೋಡಿಯ ಬಂಬಲವಾಡ ಗ್ರಾಮದಲ್ಲಿ ನಡೆದಿದೆ.

ಭೂಮಿಕಾ ಮಾಳಂಗಿ(17) ಮೃತ ದುರ್ದೈವಿ.

ಇಂದಿನಿಂದ ದ್ವಿತೀಯ ಪಿಯು ಅಂತಿಮ ಪರೀಕ್ಷೆ ಆರಂಭವಾಗಿದ್ದು, ಆಕೆ ಅದಕ್ಕಾಗಿ ಉತ್ತಮ ಸಿದ್ಧತೆ ಸಹ ಮಾಡಿಕೊಂಡಿದ್ದರು. ಇಂದು ಬೆಳಗ್ಗೆಯೂ ಪರೀಕ್ಷೆಗೆ ತೆರಳುವುದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ.





















































 
 

ಆದರೆ ಬೆಳಗ್ಗೆ ಸ್ನಾನ ಮುಗಿಸಿ ಬರುತ್ತಿದ್ದ ಹಾಗೆಯೇ ಆಕೆಗೆ ಎದೆ ನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಅವಳನ್ನು ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ ದಾರಿ ಮಧ್ಯೆಯೇ ಆಕೆ ಕೊನೆಯುಸಿರು ಎಳೆದಿದ್ದಾಗಿ ತಿಳಿದು ಬಂದಿದೆ.

error: Content is protected !!
Scroll to Top