ಆಧಾರ್‌ ಪಾನ್‌ ಗಡುವು ಜೂನ್‌ 30 ರವರೆಗೆ ವಿಸ್ತರಣೆ

ಮಂಗಳೂರು : ಪಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಜೋಡಿಸಲು ಇರುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ 2023ರ ಜೂನ್ 30ರವರೆಗೂ ವಿಸ್ತರಿಸಿದೆ. ಈ ಮೊದಲು 1 ಸಾವಿರ ರೂ ದಂಡ ಸಹಿತವಾಗಿ ಆಧಾರ್ ಹಾಗೂ ಪಾನ್ ಕಾರ್ಡ್ ಜೋಡಣೆಗೆ 2023ರ ಮಾರ್ಚ್ 31ರವರೆಗೆ ಸಮಯ ನೀಡಲಾಗಿತ್ತು. ಕೊನೆಯ ದಿನ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧದ ಜನರ ಆಕ್ರೋಶ ತೀವ್ರಗೊಂಡಿತ್ತು. ಜತೆಗೆ ಜೋಡಣೆಗೆ ವೇದಿಕೆಯಾಗಿರುವ ಆದಾಯ ತೆರಿಗೆ ಪೋರ್ಟಲ್‌ನಲ್ಲಿನ ಈ ವಿಭಾಗ ತೆರೆದುಕೊಳ್ಳುತ್ತಲೇ ಇರಲಿಲ್ಲ. ಈ ತಾಂತ್ರಿಕ ದೋಷದ ಬಗ್ಗೆ ಅನೇಕರು ದೂರು ನೀಡಿದ್ದರು.

ಈಗ ದಿನಾಂಕವನ್ನು ಜೂನ್ 30ರವರೆಗೂ ವಿಸ್ತರಣೆ ಮಾಡಲಾಗಿದೆ ಎಂದು ನೇರ ತೆರಿಗೆಗಳ ಕೇಂದ್ರ ಮಂಡಳಿ (ಸಿಬಿಡಿಟಿ) ಮಂಗಳವಾರ ಹೇಳಿಕೆ ಬಿಡುಗಡೆ ಮಾಡಿದೆ. ಈ ಸಂಬಂಧ ಪ್ರತ್ಯೇಕವಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಅದು ತಿಳಿಸಿದೆ. ಮೂರು ತಿಂಗಳ ಬಳಿಕವೂ ಈ ಎರಡೂ ಮಹತ್ವದ ದಾಖಲೆಗಳನ್ನು ಲಿಂಕ್ ಮಾಡುವುದರಲ್ಲಿ ತೆರಿಗೆದಾರ ವಿಫಲನಾದಲ್ಲಿ, ಅವರ ಪಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ. ಅಂತಹ ಪ್ರಕರಣಗಳಲ್ಲಿ ತೆರಿಗೆದಾರ ತಮ್ಮ ಪಾನ್‌ ಕಾರ್ಡ್ ಅನ್ನು ಒದಗಿಸಲು, ಅದನ್ನು ಉಲ್ಲೇಖಿಸಲು ಅಥವಾ ಬಳಸಲು ಸಾಧ್ಯವಾಗುವುದಿಲ್ಲ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top