ಸುಳ್ಯ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ದಯಾಮಣಿ ಉಮೇಶ್ ರವರಿಗೆ ‘ ‘ವಿದ್ಯಾರತ್ನ’ ಪ್ರಶಸ್ತಿ ಪ್ರದಾನ

ಬೆಂಗಳೂರು: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ (ರಿ) ಬೆಂಗಳೂರು ಹಾಗೂ ಬೆಂಗಳೂರು ದಕ್ಷಿಣ ಮತ್ತು ಉತ್ತರ ಜಿಲ್ಲಾ ಸಂಘದ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ರಾಜ್ಯ ಮಟ್ಟದ ಸಮಾವೇಶ ಮತ್ತು ಗಣ್ಯರಿಗೆ ಗೌರವ ಅರ್ಪಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026 ಸಮಾರಂಭದಲ್ಲಿ ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ದಯಾಮಣಿ ಉಮೇಶ್ ಅವರಿಗೆ ‘ ‘ವಿದ್ಯಾರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶ್ರೀಮತಿ ದಯಾಮಣಿ ಅವರು ಸುಮಾರು 36 ವರ್ಷಗಳ ಕಾಲ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ, ಪ್ರಾಂಶುಪಾಲೆಯಾಗಿ ಕರ್ತವ್ಯ ನಿರತರಾಗಿದ್ದಾರೆ. ಉತ್ತಮ ಗಾಯಕಿಯಾಗಿಯೂ ಹೆಸರು ಮಾಡಿರುವ ಅವರು ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ ಅನುಭವಿ.

ಉತ್ತಮ ಆಡಳಿತ ಮತ್ತು ಫಲಿತಾಂಶ ಸಾಧನೆಗಾಗಿ ಈ ಪ್ರಶಸ್ತಿ ಅವರನ್ನು ಹುಡುಕಿ ಬಂದಿದೆ.ಅವರ ಪತಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಐಟಿಐನ ನಿವೃತ್ತ ಕಚೇರಿ ಅಧೀಕ್ಷಕರಾಗಿದ್ದು ಪುತ್ತೂರಿನ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮತ್ತು ಎವಿಜಿ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಗಳ ಉಪಾಧ್ಯಕ್ಷ ಹಾಗೂ ರೋಟರಿ ಸ್ವರ್ಣ ಸಂಸ್ಥೆಯ ಪದಾಧಿಕಾರಿಯೂ ಆಗಿದ್ದಾರೆ.





















































 
 

error: Content is protected !!
Scroll to Top