ಬಿ ರಿಪೋರ್ಟ್ ಸಲ್ಲಿಸಲು 1 ಲ.ರೂ. ಕೇಳಿದ್ದ ಪೊಲೀಸರು
ಬೆಂಗಳೂರು: ಪ್ರಕರಣವೊಂದರ ಬಿ ರಿಪೋರ್ಟ್ ಸಲ್ಲಿಕೆಗೆ 70 ಸಾವಿರ ಲಂಚ ಪಡೆದ ಪ್ರಕರಣದಲ್ಲಿ ಎಎಸ್‌ಐ ಮತ್ತು ಪಿಎಸ್‌ಐಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಶರಣಪ್ಪ ಹಾಗೂ ಎಎಸ್‌ಐ ವೆಂಕಟೇಶ್ ಅವರನ್ನು ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರು ಬಂಧಸಿ ವಿಚಾರಣೆ ಮುಂದುವರಿಸಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮೋಟಲೂರು ಗ್ರಾಮದ ರಘು ಎಂಬವರ ಬಳಿ ಪ್ರಕರಣ ಒಂದರ ಬಿ ರಿಪೋರ್ಟ್ ಸಲ್ಲಿಕೆಗಾಗಿ 1 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ 70 ಸಾವಿರ ರೂಪಾಯಿ ಲಂಚ ಪಡೆಯುವಾಗ ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದ ಬಳಿ ಎಎಸ್‌ಐ ವೆಂಕಟೇಶ್ ರನ್ನ ರೆಡ್‌ಹ್ಯಾಂಡ್ ಆಗಿ ಹಿಡಿಯಲಾಗಿದೆ.
ಪಿಎಸ್ಐ ಶರಣಪ್ಪ ಸೂಚನೆ ಮೇರೆಗೆ ಎಎಸ್‌ಐ ವೆಂಕಟೇಶ್ ಸೂಚನೆ ಮೇರೆಗೆ ಹಣ ಪಡೆದಿದ್ದಾರೆ ಎನ್ನಲಾಗಿದ್ದು ಪಿಎಸ್ಐ ಶರಣಪ್ಪನನ್ನ ಸಹ ವಶಕ್ಕೆ ಪಡೆಯಲಾಗಿದೆ.
























