ದೊಡ್ಡಬಳ್ಳಾಪುರ: ಮೇಷ್ಟ್ರು ಮನೆ ಸರ್ಕಲ್ ಸಮೀಪ ಕಲ್ಲಂಗಡಿ ಹಣ್ಣುಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಅಪಘಾತದಲ್ಲಿ ಕ್ಯಾಂಟರ್ ಚಾಲಕ ವೇದಮೂರ್ತಿ ಅವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲ್ಲಂಗಡಿ ಹಣ್ಣುಗಳನ್ನು ಚೆನ್ನೈನಿಂದ ದಾವಣಗೆರೆಯ ಹೊನ್ನಾಳಿಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಅನಿರೀಕ್ಷಿತವಾಗಿ ಈ ದುರ್ಘಟನೆ ನಡೆದಿದೆ. ಪಲ್ಟಿಯಾದ ರಭಸಕ್ಕೆ ವಾಹನದಲ್ಲಿದ್ದ ಕಲ್ಲಂಗಡಿ ಹಣ್ಣುಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಬಿದ್ದಿದೆ. ಸಾರ್ವಜನಿಕರು ಈ ಹಣ್ಣುಗಳನ್ನು ತೆಗೆದುಕೊಂಡು ಹೋದ ಘಟನೆ ನಡೆದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಠಾಣಾ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
























