ಪುತ್ತೂರು: ಏ.10 ರಿಂದ ನಡೆಯಲಿರುವ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ವಿತರಣೆ ಮಂಗಳವಾರ ನಡೆಯಿತು.
ದರ್ಬೆಯಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಬೊಳುವಾರಿನ ಆಂಜನೇಯ ಮಂತ್ರಾಲಯದ ಬಳಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ನಾರಾವಿ, ಡಾ.ಸುಧಾ ಎಸ್.ರಾವ್ ತೆಂಗಿನಕಾಯಿ ಒಡೆದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರವೀಂದ್ರನಾಥ ಬಳ್ಳಮಜಲು, ರಾಮಚಂದ್ರ ಕಾಮತ್, ವೀಣಾ ಬಿ.ಕೆ., ರಾಮದಾಸ್ ಗೌಡ, ಮಾಜಿ ಸದಸ್ಯ ಕರುಣಾಕರ ರೈ, ನಿವೃತ್ತ ಎಸ್ಐ ಪಾಂಡುರಂಗ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಕೊಂಬು, ಕಹಳೆ, ಕಲ್ಲಡ್ಕ ಗೊಂಬೆ ಕುಣಿತದೊಂದಿಗೆ ನಗರದಲ್ಲಿ ಆಮಂತ್ರಣ ಪತ್ರಿಕೆ ವಿತರಿಸಲಾಯಿತು.