ಬಜೆಟ್‌ ಮುಖ್ಯಾಂಶಗಳು : 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ನಿಷೇಧ

ಮೀನುಗಾರಿಕೆ ಪ್ರೋತ್ಸಾಹ ಧನ ಹೆಚ್ಚಳ

ಅಡಿಕೆ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ 10 ಕೋಟಿ ರೂ. ಮೀಸಲು

ಬೆಂಗಳೂರೂ : ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೆರ ಸರಿಯಾಗಿ ಬಜೆಟ್‌ ಮಂಡನೆ ಪ್ರಾರಂಭಿಸಿದ್ದಾರೆ. ಬಜೆಟ್‌ ಘೋಷಣೆಯ ಕೆಲವು ಮುಖ್ಯಾಂಶಗಳು ಇಲ್ಲಿವೆ.





















































 
 

*ಮೀನುಗಾರಿಕೆ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಮಂಗಳೂರು ಮೀನುಗಾರಿಕಾ ವಿವಿಯಲ್ಲಿ ಸೆಂಟರ್ ಆಫ್ ಎಕ್ಸ್‌ಲೆನ್ಸ್, ಮೀನು ಮಾರಾಟ ಮಾಡಲು ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆಯಲ್ಲಿ ಸ್ಥಾಪನೆ ಮಾಡಲಾಗುವುದು. 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

*ರಾಜ್ಯದ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಸಂಪರ್ಕ ರಹಿತ ಹಾಗೂ ಜನವಸತಿ ಪ್ರದೇಶಗಳಿಗೆ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಗಾಗಿ 300 ಕಾಲುಸಂಕಗಳನ್ನು ನಿರ್ಮಾಣ ಮಾಡಲಾಗುವುದು.

*ಹದಿನಾರು ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು.

*ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಕೃಷಿ ಮಾಹಿತಿಗಾಗಿ ಎಐ ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಆರಂಭಿಸಲಾಗುವುದು.

*ಪಶು ವೈದ್ಯ ಸಂಸ್ಥೆಗಳಿಗಾಗಿ ಹೊಸದಾಗಿ 100 ಕಟ್ಟಡ ನಿರ್ಮಾಣ ಮಾಡಲಾಗುತ್ತದೆ, ಬೆಳಗಾವಿ, ಕಲಬುರಗಿಯಲ್ಲಿ ಕುರಿ ಸಾಕಾಣಿಕೆಗೆ ಪೋತ್ಸಾಹ ನೀಲಡಾಗುತ್ತದೆ. ಹಸು, ಎಮ್ಮೆ ಖರೀದಿಸಲು ಪ್ರೋತ್ಸಾಹ ಧನಕ್ಕೆ 40 ಕೋಟಿ ರೂ. ಮೀಸಲಿಡಲಾಗುವುದು, 20 ತಾಲೂಕು ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. 10 ಕೋಟಿ ರೂ. ವೆಚ್ಚದಲ್ಲಿ 15 ಪಶು ಆಸ್ಪತ್ರೆಗಳು ಮೇಲ್ದರ್ಜೆಗೆ ಏರಿಸಲಾಗುವುದು. ಮೈಸೂರಿನಲ್ಲಿ ಬೊಯರ್ ಮೇಕೆ ತಳಿ ಸಂವರ್ಧನಾ ಕೇಂದ್ರ ಸ್ಥಾಪಿಸಲಾಗುವುದು. ಬಂಡೂರು ಕುರಿ ಸಂವರ್ಧನಾ ಕೇಂದ್ರ ಅಭಿವೃದ್ಧಿಗೆ ಒತ್ತು ನೀಡಲಾಗುವುದು.

*ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ ಹಾಗೂ ತೆಂಗು ಬೆಳೆಗಾರರ ಸಮಸ್ಯೆಯನ್ನು ನಿವಾರಿಸಲು 10 ಕೋಟಿ ರೂ. ಮೀಸಲಿಡಲಾಗಿದೆ.

*ಆರೋಗ್ಯ ಇಲಾಖೆ ಮೂಲ ಸೌಕರ್ಯ ಅಭಿವೃದ್ಧಿಗೆ 900 ಕೋಟಿ ರೂ. ಮೀಸಲಿಡಲಾಗುವುದು, ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಟ್ರಾಮಾ ಕೇರ್ ಸೆಂಟರ್ ತೆರೆಯಲಾಗುವುದು. ಐಸಿಯುಗಳಿಗೆ ಉಪಕರಣ ಮೇಲ್ದರ್ಜೆಗೇರಿಸಲು 45 ಕೋಟಿ ರೂಪಾಯಿ ಮೀಸಲಿಡಲಾಗುವುದು. ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಪೌಷ್ಟಿಕ ಪುನಶ್ಚೇತನ ಕೇಂದ್ರ ತೆರೆಯಲಾಗುವುದು. 18 ವರ್ಷದವರೆಗಿನ ಮಧುಮೇಹ ರೋಗಿಗಳಿಗೆ ಉಚಿತ ಇನ್ಸುಲಿನ್ ಪೆನ್ ನೀಡಲಾಗುವುದು. ಮಾರಣಾಂತಿಕ ಕಾಯಿಲೆ ರೋಗಿಗಳಿಗೆ ಕೇರಳ ಮಾದರಿ ಗೃಹಾಧಾರಿತ ಆರೈಕೆ ಒದಗಿಸಲಾಗುವುದು. ಇಸ್ಕಾನ್ ಮೂಲಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಹಾರ ಪೂರೈಕೆ ಮಾಡಲಾಗುವುದು. ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಶೀಘ್ರ ಭರ್ತಿ ಮಾಡಲಾಗುವುದು.

*ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಿಸಲಾಗುತ್ತದೆ. 100 ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ ಮಾಡಲಾಗುತ್ತದೆ. ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ. ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಕೃಷಿ ಮಾಹಿತಿಗಾಗಿ AI ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಚಿತ್ರದುರ್ಗದಲ್ಲಿ ಕೃಷಿ ಉದ್ದಿಮೆ ತರಬೇತಿ ಕೇಂದ್ರ ಉನ್ನತೀಕರಣಗೊಳಿಸಲಾಗುತ್ತದೆ.

*ಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ ಮಾಡುವುದಾಗಿ ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್‌, ಕೊಪ್ಪಳ ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆಜಿಎಫ್‌ನಲ್ಲಿ ESI ಆಸ್ಪತ್ರೆ ಉನ್ನತೀಕರಣಗೊಳಿಸಲಾಗುವುದು.

*ಈ ವರ್ಷ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲಿಡಲಾಗುವುದು.

*60 ಕೋಟಿ ರೂ. ವೆಚ್ಚದಲ್ಲಿ ನೂತನ 10 GTTC ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತದೆ, ಕಾರ್ಮಿಕರ ಮಕ್ಕಳಿಗಾಗಿ ನೂತನ 62 ವಸತಿ ಶ್ರಮಿಕ ಶಾಲೆ ಆರಂಭಿಸಲಾಗುತ್ತದೆ. ಒಟ್ಟು 104 ಶಾಲೆಗಳ ಆರಂಭಕ್ಕೆ ಆದ್ಯತೆ ನೀಡಲಾಗುತ್ತದೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಕೌಶಲ ತರಬೇತಿ ಅಕಾಡೆಮಿ ತೆರೆಯಲಾಗುತ್ತದೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ ಅಕಾಡೆಮಿ ಸ್ಥಾಪನೆ ಮಾಡಲಾಗುತ್ತದೆ. ಕಾರ್ಮಿಕರ ವಿಮಾ ಸೊಸೈಟಿಯಿಂದ ಹುಬ್ಬಳ್ಳಿ, ಇಂದಿರಾನಗರ , ಮೈಸೂರು, ದೊಡ್ಡ ಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಆರಂಭಿಸಲಾಗುತ್ತದೆ.

*ಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹಣೆ ಗುರಿ ನೀಡಲಾಗಿದೆ. ನೊಂದಣಿ ಹಾಗೂ ಮುದ್ರಾಂಕ ಇಲಾಖೆಗೆ 29 ಸಾವಿರ ಕೋಟಿ ರಾಜಸ್ವ ಗುರಿ, ಅಬಕಾರಿ ಇಲಾಖೆ ಇಲಾಖೆಯಲ್ಲಿ 45,000 ಕೋಟಿ ರೂ. ಆದಾಯ ಗುರಿ ನೀಡಲಾಗಿದೆ.

*ಈ ವರ್ಷ 56,432 ಉದ್ಯೋಗ ಭರ್ತಿಗೆ ಚಾಲನೆ ನೀಡಲಾಗುತ್ತಿದೆ. ನೇಮಕಾತಿಗೆ ವಯೋಮಿತಿ 5 ವರ್ಷಗಳ ಸಡಿಲಿಕೆ ನೀಡಿದ್ದೇವೆ. ಕರ್ನಾಟಕ 45 ಉತ್ಪನ್ನಗಳಿಗೆ GI ಮಾನ್ಯತೆ ದೊರೆತಿದೆ.ಮುಜರಾಯಿ ಇಲಾಖೆ ವ್ಯಾಪ್ತಿಯ 259 ಕಲ್ಯಾಣಿಗಳ ಪುನರುಜ್ಜೀವನ ಮಾಡಲಾಗುತ್ತದೆ. ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆಗೆ 100 ಕೋಟಿ ರೂ. ಅನುದಾನ ನೀಡಲಾಗುತ್ತದೆ.

*ಕರ್ನಾಟಕದ ಒಟ್ಟು ಸಾಲ 8 ಲಕ್ಷ 24,000 389 ಕೋಟಿ ರೂ. ಇದೆ, ಗಣಿಗಾರಿಕೆಯಿಂದ 11,000 ಕೋಟಿ ರೂಪಾಯಿ ಶುಲ್ಕ ಅಂದಾಜು ಬರಬಹುದೆಂದು ಅಂದಾಜಿಸಲಾಗಿದೆ.

*ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್​ ವೇ ನಿರ್ಮಾಣ ಮಾಡಲಾಗುತ್ತದೆ. ಪಿಪಿಪಿ ಮಾದರಿಯಲ್ಲಿ ರೋಪ್​ ವೇ ನಿರ್ಮಾಣ ಮಾಡಲಾಗುತ್ತಿದೆ.

*ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ ತೆರೆಯಲಾಗುತ್ತದೆ, ಕುವೆಂಪು ವಿವಿಯಲ್ಲಿ ಅಧ್ಯಯನ ಪೀಠ ಸ್ಥಾಪನೆ ಮಾಡಲಾಗುವುದು.

*ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 13,000 ಕೋಟಿ ರೂ. ಅನುದಾನ ನೀಡಲಾಗುವುದು, ಮೂರು ವರ್ಷಗಳಲ್ಲಿ ಅವಧಿಯಲ್ಲಿ 13,000 ಕೋಟಿಗಳ ಅನುದಾನ ನೀಡಲಾಗುವುದು.

ಶಿಕ್ಷಣ ಇಲಾಖೆಗೆ 47,224 ಕೋಟಿ ರೂ. ಅನುದಾನ ಹಂಚಿಕೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ರೂ.
ಇಂಧನ ಇಲಾಖೆಗೆ 29,947 ಕೋಟಿ ರೂ. ಅನುದಾನ ಹಂಚಿಕೆ
ಗ್ರಾಮೀಣಾಭಿವೃದ್ಧಿ ಇಲಾಖೆಗೆ 26,559 ಕೋಟಿ ರೂ. ಅನುದಾನ
ಜಲಸಂಪನ್ಮೂಲ ಇಲಾಖೆಗೆ 22,436 ಕೋಟಿ ರೂ. ಅನುದಾನ
ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 22,203 ಕೋಟಿ ರೂ.
ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 23,100 ಕೋಟಿ ರೂ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,817 ಕೋಟಿ ರೂ.
ಕಂದಾಯ ಇಲಾಖೆಗೆ 19,843 ಕೋಟಿ ರೂ. ಅನುದಾನ ಹಂಚಿಕೆ
ಸಮಾಜ ಕಲ್ಯಾಣ ಇಲಾಖೆಗೆ 18,612 ಕೋಟಿ ರೂ. ಅನುದಾನ
ಲೋಕೋಪಯೋಗಿ ಇಲಾಖೆಗೆ 11,424 ಕೋಟಿ ರೂ. ಹಂಚಿಕೆ
ಆಹಾರ ಇಲಾಖೆಗೆ 7,942 ಕೋಟಿ ರೂ. ಅನುದಾನ ಹಂಚಿಕೆ
ಕೃಷಿ ಇಲಾಖೆಗೆ 8,373 ಕೋಟಿ ರೂ. ಅನುದಾನ ಹಂಚಿಕೆ
ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಗೆ 4,084 ಕೋಟಿ ರೂ.
ಇತರೆ ಇಲಾಖೆಗಳಿಗೆ ಒಟ್ಟು 1,72,757 ಕೋಟಿ ರೂ. ಅನುದಾನ

error: Content is protected !!
Scroll to Top