ವಿಟ್ಲದ ನೂಜಿಯಲ್ಲಿ ಮತ್ತೊಂದು ಭಾರಿ ಸ್ಫೋಟ

ದಾಸ್ತಾನು ಇಟ್ಟ ಪಟಾಕಿ ಬಿಸಿಲಿಗೆ ಸ್ಫೋಟಿಸಿ ಆತಂಕ

ವಿಟ್ಲ: ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ಮ್ತೊಮ್ಮೆ ಭಾರಿ ಸ್ಫೋಟ ಸಂಭವಿಸಿದೆ. ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸಿಡಿದು ಭಾರಿ ಸ್ಫೋಟಗೊಂಡ ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಕಳೆದ ವರ್ಷ ವಿಟ್ಲ ಮೂಡ್ನೂರು ಗ್ರಾಮದ ಮಾಡತ್ತಡ್ಕ ಪರಿಸರದ ಕೋರೆಯಲ್ಲಿ ಭಾರಿ ಪ್ರಮಾಣದಲ್ಲಿ ಸ್ಫೋಟ ಗೊಂಡ ಘಟನೆ ನಡೆದಿತ್ತು. ಈ ಘಟನೆಯಿಂದ ಆಸುಪಾಸಿನ ಮನೆಗಳಿಗೆ, ಮರ ಗಿಡಗಳಿಗೆ ಹಾನಿಯಾಗಿತ್ತು.

ಇದೀಗ ಮತ್ತೆ ಅದೇ ಪರಿಸರದಲ್ಲಿ ಶುಕ್ರವಾರ ಮಧ್ಯಾಹ್ನ ಭಾರಿ ಪ್ರಮಾಣದ ಸ್ಫೋಟದ ಶಬ್ದ ಕೇಳಿಸಿ ಜನರು ಭಯ ಭೀತರಾಗಿದ್ದಾರೆ. ಪಟಾಕಿ ಸ್ಫೋಟಗೊಂಡು ವಾತಾವರಣದ ತುಂಬಾ ಬಾನೆತ್ತರದಲ್ಲಿ ಹೊಗೆ ಆವರಿಸಿದೆ.





















































 
 

ಕಂಬಳಬೆಟ್ಟು ನಿವಾಸಿ ಗಫೂರ್ ಎಂಬವರು ದೇವಸ್ಥಾನದ ಜಾತ್ರೋತ್ಸವಕ್ಕೆ ಪಟಾಕಿ ತಯಾರಿಸಿ, ಶೇಖರಣೆ ಮಾಡಿದ್ದರು. ಮಧ್ಯಾಹ್ನದ ವೇಳೆಗೆ ಬಿಸಿಲಿಗೆ ಇದ್ದಕ್ಕಿಂದಂತೆ ಪಟಾಕಿ ಸ್ಫೋಟಗೊಂಡಿದೆ. ಸ್ಥಳದಲ್ಲಿ ಕಾರ್ಮಿಕರು ಹಾಗೂ ಜನರು ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. 2017ರಲ್ಲಿ ಗಫೂರ್ ಎಂಬವರ ಮನೆ ಸಮೀಪ ಪಟಾಕಿ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಇನ್ನೂ ಪ್ರಕರಣ ಇತ್ಯಾರ್ಥಗೊಂಡಿಲ್ಲ.

ಅದರ ಸಮೀಪವೇ ಮತ್ತೊಂದು ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಂದಾಯ ನಿರೀಕ್ಷಕ ರವಿ, ವಿಟ್ಲ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಪ್ರಕಾಶ್ ದೇವಾಡಿಗ, ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಲ್ಲಿ ಪಟಾಕಿ ತಯಾರಿಸಲು ಯಾವುದೇ ಅನುಮತಿ ಪಡೆದಿರುವುದಿಲ್ಲ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

error: Content is protected !!
Scroll to Top