ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಭಟ್ಕಳ: ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ವೈಯಕ್ತಿಕ ಕಾರಣಗಳ ಬೇಸರದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊನ್ನಗದ್ದೆಯಲ್ಲಿ ನಡೆದಿದೆ.

ಮೃತನನ್ನು ‌ಕೌಶಿಕ್ ಸುಬ್ರಾಯ ನಾಯ್ಕ ಎಂದು ಗುರುತಿಸಲಾಗಿದೆ.

ಕೌಶಿಕ್ ಓದಿನಲ್ಲಿ ಪ್ರತಿಭಾವಂತನಾಗಿದ್ದು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದ. ಆದರೆ ಶುಕ್ರವಾರ ಭೌತಶಾಸ್ತ್ರ ಪರೀಕ್ಷೆ ಬರೆಯಬೇಕಾಗಿದ್ದ ಹುಡುಗ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ವೈಯಕ್ತಿಕ ಕಾರಣಗಳಿಂದ ಬೇಸತ್ತು ಆತ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.





















































 
 

ಭಟ್ಕಳ ಗ್ರಾಮೀಣ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ

error: Content is protected !!
Scroll to Top