ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಬುಧವಾರದ ಕಾರ್ಯಕ್ರಮ ಈ ಕೆಳಗಿನಂತಿದೆ.
ವೈದಿಕ ಕಾರ್ಯಕ್ರಮದ ಅಂಗವಾಗಿ ಪ್ರಾತಃಕಾಲ 5 ರಿಂದ ಉಷಃಪೂಜೆ, ಅಂಕುರ ಪೂಜೆ, ಮಹಾಗಣಪತಿ ಹೋಮ, ಸೃಷ್ಟಿತತ್ತ್ವ ಹೋಮ, ತತ್ತ್ವಕಲಶ ಪೂಜೆ, ತತ್ತ್ವಕಲಶಾಭಿಷೇಕ, ಮಂಟಪ ಸಂಸ್ಕಾರ, ಕುಂಭೇಶ ಕರ್ಕರಿಪೂಜೆ, ಬ್ರಹ್ಮಕಲಶ ಪೂಜೆ, ಪರಿಕಲಶ ಪೂಜೆ, ಮಧ್ಯಾಹ್ನ 12.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಲಿದೆ.
ಸಂಜೆ 5 ರಿಂದ ದೀಪಾರಾಧನೆ, ಅಧಿವಾಸಹೋಮ, ಕಲಶಾಧಿವಾಸ, ಅಧಿವಾಸಬಲಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ಸಂಜೆ 6 ರಿಂದ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆ ಸಂಚಾಲಕ ಭಾಸ್ಕರ ಆಚಾರ್ಯ, ಮುಕ್ವೆ ಉಮಾಮಹೇಶ್ವರ ಸೇವಾ ಟ್ರಸ್ಟ್ ಮಾಜಿ ಅಧ್ಯಕ್ಷ ತಿರುಮೇಶ್ವರ ಭಟ್, ನರಿಮೊಗರು ಗ್ರಾಪಂ ಸದಸ್ಯೆ ಪುಷ್ಪಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಆನಂದ ಕೆ. ಪಾಲ್ಗೊಳ್ಳಲಿದ್ದಾರೆ.
ಸಂಜೆ 6 ರಿಂದ ಪುರುಷರಕಟ್ಟೆ ಶ್ರೀದೇವಿ ಭಜನಾ ಮಂಡಳಿಯಿಂದ, 7 ರಿಂದ ಪುರುಷರಕಟ್ಟೆ ದಾಬೋಲಿ ಶ್ರೀ ಪೂರ್ಣಾನಂದ ಭಜನಾ ಮಂದಿರದ ವತಿಯಿಂದ ಭಜನಾ ಕಾರ್ಯಕ್ರಮ ಜರಗಲಿದೆ. ಸಂಜೆ 6.45 ಪಂಚಮಿ ಸ್ವರಾಂಜಲಿ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.