ವಿಜಯಪುರ: ಕಾರು ಪಲ್ಟಿಯಾದ ಪರಿಣಾಮ ಈರ್ವರು ಸ್ಥಳದಲ್ಲೇ ಮೃತಪಟ್ಚ ಘಟನೆ ಬಸವನ ಬಾಗೇವಾಡಿ ತಾಳೀಕೋಟೆಯ ಬಸವನಹಟ್ಟಿ ಕ್ರಾಸ್ ಬಳಿ ನಡೆದಿದೆ.
ಬೆಳಗಾವಿಯ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ (70) ಮತ್ತು ಕಾಮಪ್ಪ ಅವರಾದಿ (65) ಎಂಬವರೇ ಮೃತ ದುರ್ದೈವಿಗಳು.
ಸ್ವಿಫ್ಟ್ ಕಾರಿನಲ್ಲಿ ನಾಲ್ವರು ಶ್ರೀಶೈಲಕ್ಕೆ ಹೋಗುತ್ತಿದ್ದು, ಈ ವೇಳೆ ದುರಂತ ಸಂಭವಿಸಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾಗಿ ತಿಳಿದು ಬಂದಿದೆ.
ಬಸವನಬಾಗೇವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


























