ಪುತ್ತೂರು: ಕೃಷ್ಣಮುಳಿಯ ಗ್ರೀನ್ ಎನರ್ಜಿ ಎಲ್.ಎಲ್. ಪಿ ಮತ್ತು ರೋಟರಿ ಕ್ಲಬ್ ಪುತ್ತೂರು ಈಸ್ಟ್, ಸ್ವಚ್ಛಭಾರತ್ ಚಾರಿಟೇಬಲ್ ಟ್ರಸ್ಟ್ ಮತ್ತು ರಿಟ್ಯಾಪ್ ಸೊಲ್ಯೂಷನ್ಸ್ ಇವರ ಸಾರಥ್ಯದಲ್ಲಿ ಹಾಗೂ ನಗರಸಭಾ ಪುತ್ತೂರು ಇದರ ಸಹಯೋಗದೊಂದಿಗೆ ಸ್ವಚ್ಛ ಪುತ್ತೂರು ಅಭಿಯಾನದ ಪ್ರಮುಖ ಯೋಜನೆಯಾಗಿರುವ ಭಾರತದ ನಗರಸಭಾ ವ್ಯಾಪ್ತಿಯಲ್ಲಿ ಪ್ರಪ್ರಥಮವಾಗಿ ನಿರ್ಮಾಣಗೊಂಡಿರುವ ಕಂಪ್ರೆಸ್ಡ್ ಬಯೋ ಗ್ಯಾಸ್(ಸಿ. ಬಿ. ಜಿ.) ಘಟಕ ಇದರ ಲೋಕಾರ್ಪಣೆ ಮಾ. 15 ರಂದು ಬೆಳಗ್ಗೆ 10.30 ಕ್ಕೆ ಬನ್ನೂರು ಡಂಪಿಂಗ್ ಯಾರ್ಡ್‌ನಲ್ಲಿ ನಡೆಯಲಿದೆ.
ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೆರವೇರಿಸಲಿದ್ದಾರೆ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ದೀಪ ಪ್ರಜ್ವಲನೆ ಮಾಡಲಿದ್ದು, ಕೃಷ್ಣ ಮುಳಿಯ ಗ್ರೀನ್ ಎನರ್ಜಿಯ ಎಂ.ಡಿ. ಕೃಷ್ಣ ನಾರಾಯಣ ಮುಳಿಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಅತಿಥಿಗಳಾಗಿ ಎಂ.ಎಲ್.ಸಿ. ಕಿಶೋರ್ ಕುಮಾರ್ ಬೊಟ್ಯಾಡಿ, ಪುತ್ತೂರಿನ ಎ.ಸಿ. ಸ್ಟೆಲ್ಲಾ ವರ್ಗೀಸ್, ಪುತ್ತೂರು ನಗರ ಸಭಾ ಪೌರಾಯುಕ್ತೆ ವಿದ್ಯಾ ಕಾಳೆ, ಮಾಜಿ ಶಾಸಕ ಸಂಜೀವ ಮಠಂದೂರು ಅವರು ಭಾಗವಹಿಸಲಿದ್ದಾರೆ.
ಪುತ್ತೂರು ನಗರಸಭೆಯ ಮಾಜಿ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ್, ಮಾಜಿ ರೋಟರಿ ಜಿಲ್ಲಾ ಗವರ್ನರ್ ಡಿಸ್ಟಿಕ್ಸ್ 3181 ರೋ. ಎಚ್. ಆರ್. ಕೇಶವ, ರಿಟ್ಯಾಪ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕಿ ಡಾ. ದಿವ್ಯಾ ಪ್ರಶಾಂತ್, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಅಧ್ಯಕ್ಷ ರೊ. ಶಶಿಧರ್ ಕಿನ್ನಿಮಜಲು ಅವರ ಗೌರವ ಉಪಸ್ಥಿತಿ ಇರಲಿದೆ.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರೂ ಭಾಗವಹಿಸುವಂತೆ ಆಯೋಜಕರು ಆಮಂತ್ರಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























