ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಡಿ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುವ ಸಂದರ್ಭ ಶ್ಯಾಂಪು, ಸೋಪು ಬಳಕೆ ಮಾಡದಂತೆ ಧರ್ಮಸ್ಥಳ ಗ್ರಾ. ಪಂ. ಆದೇಶ ಹೊರಡಿಸಿದೆ.
ಪ್ರಸಿದ್ಧ ದೇವಸ್ಥಾನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿವಿಧೆಡೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಲ್ಲಿನ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಿದರೆ ಪಾಪ ಕಳೆಯುತ್ತದೆ ಎಂಬ ನಂಬಿಕೆಯಿದೆ. ಆದರೆ ಸ್ನಾನದ ಸಂದರ್ಭ ಶ್ಯಾಂಪು ಸೋಪು ಬಳಕೆ ಮಾಡುವುದರಿಂದ ನದಿಯಲ್ಲಿರುವ ಜಲಚರಗಳ ಮೇಲೆ ದುಷ್ಪಾರಿಣಾಮ ಬೀರುತ್ತದೆ ಮತ್ತು ಸ್ನಾನಕ್ಕೆ ಯೋಗ್ಯವಾಗದ ನೀರಾಗಿ ಪರಿವರ್ತನೆಯಾಗುತ್ತದೆ. ಈ ಕಾರಣದಿಂದಾಗಿ ಧರ್ಮಸ್ಥಳ ಗ್ರಾ. ಪಂ. ನೇತ್ರಾವತಿ ನದಿಯಲ್ಲಿ ಸ್ನಾನ ಮಾಡುವ ಸಂದರ್ಭ ಶ್ಯಾಂಪು, ಸೋಪು ಬಳಕೆ ಮಾಡದಂತೆ ಹಾಗೂ ಸುತ್ತಲಿನ ಅಂಗಡಿಗಳಲ್ಲಿ ಶ್ಯಾಂಪು, ಸೋಪು ಮಾರಾಟ ಮಾಡದಂತೆ ಆದೇಶ ಹೊರಡಿಸಿದೆ.