ಇಂಧನ ಟ್ಯಾಂಕ್‌ಗೆ ಡ್ರೋನ್ ಬಡಿದು ಬೆಂಕಿ
ದುಬೈ: ಇರಾನ್ ಡ್ರೋನ್ ದಾಳಿಗೆ ದುಬೈ ವಿಮಾನ ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ. ಸೋಮವಾರ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ಇಂಧನ ಟ್ಯಾಂಕ್‌ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಕಾಣಿಸಿಕೊಂಡಿತು. ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿವೆ.
ಬೆಂಕಿಯನ್ನು ನಂದಿಸಲು ದುಬೈ ನಾಗರಿಕ ರಕ್ಷಣಾ ಸಿಬ್ಬಂದಿಯನ್ನು ತಕ್ಷಣವೇ ನಿಯೋಜಿಸಲಾಗಿದೆ. ಸುತ್ತಮುತ್ತ ಸುರಕ್ಷತಾ ಕ್ರಮಗಳನ್ನು ಸಕ್ರಿಯಗೊಳಿಸಿರುವುದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿ ಡ್ರೋನ್ ದಾಳಿಯಿಂದ ಇಂಧನ ಟ್ಯಾಂಕ್‌ಗಳಲ್ಲಿ ಒಂದರ ಮೇಲೆ ಪರಿಣಾಮ ಬೀರಿತು ಎಂದು ದುಬೈ ಮಾಧ್ಯಮ ಕಚೇರಿ Xನಲ್ಲಿ ಪೋಸ್ಟ್ ಮಾಡಿದೆ. ದುಬೈ ನಾಗರಿಕ ರಕ್ಷಣಾ ತಂಡಗಳು ತಕ್ಷಣ ಪ್ರತಿಕ್ರಿಯಿಸಿ ಬೆಂಕಿಯನ್ನು ನಂದಿಸುವ ಕೆಲಸ ಮಾಡುತ್ತಿವೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಕಚೇರಿ ದೃಢಪಡಿಸಿದೆ.


























