ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ನಾಪತ್ತೆಯಾಗಿದ್ದ ‌ವಾರಂಟ್ ಆರೋಪಿಯ ಬಂಧನ

ಬಂಟ್ವಾಳ: ಪೊಲೀಸರ ಕಣ್ಣಿಗೆ ಮಣ್ಣೆರಚಿ ಸುಮಾರು ಎಂಟು ವರ್ಷಗಳಿಂದ ಪರಾರಿಯಾಗಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಮಹಮ್ಮದ್ ಅನಾಸ್ (38) ಎಂದು ಗುರುತಿಸಲಾಗಿದೆ. ಈತ ಕೇರಳದ ಮಲಪ್ಪುರಂ ಜಿಲ್ಲೆಯವನು. ಈತನ ವಿರುದ್ಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 166/2017 ರ ಪ್ರಕರಣಕ್ಕೆ ಸಂಬಂಧಿಸಿ, ಐಪಿಸಿ ಕಲಂ 379 ಹಾಗೂ 34 ಅಡಿ ಪ್ರಕರಣ ದಾಖಲಾಗಿತ್ತು.

ಆರೋಪಿಯನ್ನು ಮಾ. 16 ರಂದು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕ ಕೃಷ್ಣಕಾಂತ ಕೆ. ಅವರ ನೇತೃತ್ವದಲ್ಲಿ ಹೆಡ್ ಕಾನ್ಸ್‌ಟೇಬಲ್ 314 ಸಂತೋಷ್ ಹಾಗೂ ಪಿಸಿ 2462 ಶಿವಾನಂದ ಮಡ್ಡಿ ಅವರು ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ ಪೊಳಚಿ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.



























































 
 

ನ್ಯಾಯಾಲಯಕ್ಕೆ ಬಂಧಿತ ಆರೋಪಿಯನ್ನು ಹಾಜರುಪಡಿಸಲಾಗಿದೆ.

error: Content is protected !!
Scroll to Top