ನವದೆಹಲಿ: ಕಟ್ಟಡವೊಂದರಲ್ಲಿ ಬೆಂಕಿ ಹತ್ತಿಕೊಂಡು ಒಂಬತ್ತು ಜನರು ಸಜೀವ ಸುಟ್ಟು ಹೋದ ಘಟನೆ ನೈಋತ್ಯ ದೆಹಲಿಯ ಪಾಲಂ ಎಂಬಲ್ಲಿ ನಡೆದಿದೆ.
ಇಂದು ಬೆಳಗ್ಗೆ ಅಪಾರ್ಟ್ಮೆಂಟ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದಲ್ಲಿ ಏಕಾಏಕಿ ಈ ದುರಂತ ಸಂಭವಿಸಿರುವುದಾಗಿದೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದೆ. ಸುಮಾರು 30 ಅಗ್ನಿಶಾಮಕ ವಾಹನಗಳು ಧಾವಿಸಿ ರಕ್ಷಣಾ ಕಾರ್ಯ ನಡೆಸಿವೆ. ಕಟ್ಟಡದ ಒಳಗೆ ಜನರು ಸಿಲುಕಿರುವ ಶಂಕೆಯೂ ವ್ಯಕ್ತವಾಗಿದೆ.



























