ಅಕ್ಷಯ ಕಾಲೇಜಿನಲ್ಲಿ ವಾಣಿಜ್ಯ ವ್ಯೂಹ ಭಿತ್ತಿಪತ್ರ ಅನಾವರಣ

ಸಂಪ್ಯ:ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಇನ್ವಿಕ್ತ ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ‘ವಾಣಿಜ್ಯ ವ್ಯೂಹ’ ಎಂಬ ಶಿರೋನಾಮೆಯಲ್ಲಿ ಭಿತ್ತಿಪತ್ರದ ಉದ್ಘಾಟನಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮವನ್ನು ಕೇಶವ್ ಅಮೈ (ಆಡಳಿತ ನಿರ್ದೇಶಕರು ಎಸ್.ಆರ್.ಕೆ. ಲ್ಯಾಡರ್ಸ್ ಪುತ್ತೂರು) ಇವರು ಉದ್ಘಾಟಿಸಿ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಎಲ್ಲಿದ್ದರು ತಮ್ಮ ಬದುಕನ್ನು ರೂಪಿಸುವಲ್ಲಿ ಯಶಸ್ವಿಯಾಗುತ್ತಾರೆ. ಸಿಕ್ಕ ಅವಕಾಶಗಳನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಂಡು ಜೀವನದಲ್ಲಿ ಯಶಸ್ವಿಯನ್ನು ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಮುಖ್ಯ ಅತಿಥಿ ಡಾ. ಅಕ್ಷಯ್ (ಕಾರ್ಯದರ್ಶಿ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳು ಪುತ್ತೂರು) ಮಾತನಾಡಿ, ಕೇಶವ್ ಅಮೈ ಅವರನ್ನು ಪ್ರೇರಣೆಯಾಗಿ ತೆಗೆದುಕೊಂಡು ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಪ್ರೇರಪಿಸಿದರು.



























































 
 

ಅಧ್ಯಕ್ಷತೆಯನ್ನು ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ಅವರು ಮಾತನಾಡಿ, ಕಾಲೇಜಿನಲ್ಲಿ ಭಿತ್ತಿಪತ್ರವನ್ನು ಅನಾವರಣ ಗೊಳಿಸಿದ ವಾಣಿಜ್ಯ ವಿಭಾಗಕ್ಕೆ ಶುಭಹಾರೈಸಿದರು. ವಿದ್ಯಾರ್ಥಿಗಳ ಕ್ರಿಯಾಶೀಲತೆಯನ್ನು ತೋರಿಸಿಕೊಳ್ಳಲು ಇಂತಹ ಭಿತ್ತಿಪತ್ರಗಳು ಒಂದು ಉತ್ತಮ ವೇದಿಕೆ ಎಂದು ಹೇಳಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥ ಕಿಶೋರ್ ಕುಮಾರ್ ರೈ ಕೆ. ಹಿತನುಡಿಗಳನ್ನಾಡಿದರು.

ವಾಣಿಜ್ಯ ಸಂಘದ ಸಂಯೋಜಕಿ ಮೇಘಶ್ರೀ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇನ್ವಿಕ್ತ ವಾಣಿಜ್ಯ ಸಂಘದ ಕಾರ್ಯದರ್ಶಿ ವಿಂಧುಶ್ರೀ ಉದ್ಘಾಟಕರನ್ನು ಪರಿಚಯಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಸುಶ್ಮಿತಾ ಪ್ರಾರ್ಥಿಸಿ, ಇನ್ವಿಕ್ತ ವಾಣಿಜ್ಯ ಸಂಘದ ಅಧ್ಯಕ್ಷ ವಿಖ್ಯಾತ್ ಸ್ವಾಗತಿಸಿ, ಕೋಶಾಧಿಕಾರಿ ವೀಕ್ಷಿತ್ ವಂದಿಸಿ, ಅಕ್ಷಿತ್ ಕಾರ್ಯಕ್ರಮವನ್ನು ನಿರೂಪಿಸಿದರು.

error: Content is protected !!
Scroll to Top