ಸವಣೂರು: ಎಸ್ ಎಸ್ ಎಲ್ ಸಿ 2026 ಪರೀಕ್ಷಾ ಕೇಂದ್ರವಾದ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಕೆ. ಅವರು ದೀಪ ಪ್ರಜ್ವಲನೆಯ ಮೂಲಕ ಪರೀಕ್ಷೆಗೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪರೀಕ್ಷಾ ಅಧೀಕ್ಷರ ಶಿವಕುಮಾರ್, ಉಪಧೀಕ್ಷಕಿ ಲಕ್ಷ್ಮೀ, ಪ್ರಶ್ನೆಪತ್ರಿಕೆ ಅಧೀಕ್ಷಕ ಸತೀಶ್ ಮತ್ತು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ ಉಪಸ್ಥಿತರಿದ್ದರು.



























