ನದಿಯಲ್ಲಿ ಮುಳುಗಿ ಬಾಲಕ ಸಾವು

ಮುಂಡಾಜೆ: ದ್ವಿತೀಯ ಪಿಯುಸಿಯ ವಿದ್ಯಾರ್ಥಿಯೊಬ್ಬ ನೇತ್ರಾವತಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಅರಸಮಜಲು ಎಂಬಲ್ಲಿ ನಡೆದಿದೆ.

ಮೃತನನ್ನು ನಿಶಾಂತ್ ಎಂದು ಗುರುತಿಸಲಾಗಿದೆ. ಈತ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ. ಮಾ. 18 ರ ಮಧ್ಯಾಹ್ನ ಆತ ಈಜಾಟಕ್ಕೆಂದು ನದಿಗೆ ತೆರಳಿದ್ದು, ಈ ವೇಳೆ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಆತನ ಜೊತೆಗಿದ್ದವರು ಅವನನ್ನು ರಕ್ಷಿಸಲು ಪ್ರಯತ್ನ ನಡೆಸಿದ್ದಾರೆ. ಆದರೆ ದುರದೃಷ್ಟವಶಾತ್ ಅದಾಗಲೇ ಆತ ಸಾವನ್ನಪ್ಪಿದ್ದಾನೆ.



























































 
 

error: Content is protected !!
Scroll to Top